AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

Mysuru Dasara 2021: ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ. 

SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ
ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ
TV9 Web
| Updated By: ganapathi bhat|

Updated on: Sep 29, 2021 | 6:59 PM

Share

ಮಂಡ್ಯ: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ (ಸೆಪ್ಟೆಂಬರ್ 28) ಅಧಿಕೃತ ಆದೇಶ ಹೊರಡಿಸಿದ್ದರು. ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ. 

ಈ ವರ್ಷದ ವಿಶ್ವವಿಖ್ಯಾತ ಮೈಸೂರಿನ ದಸರಾ ಉದ್ಘಾಟನೆಗೆ ನನ್ನನ್ನು ಆಮಂತ್ರಿಸಿರುವ ನಿಮ್ಮ ಹಾಗೂ ನಿಮ್ಮ ಮಂತ್ರಿ ಮಂಡಲದ ಎಲ್ಲರಿಗೂ ನನ್ನ ಧನ್ಯವಾದಗಳು. ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಪ್ರಥಮವಾಗಿ ವಿಜಯನಗರ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಕಾಲದಲ್ಲಿ ಪ್ರಾರಂಭಗೊಂಡ ದಸರಾ ಶ್ರೀ ರಾಜ ಒಡೆಯರ್ ಅವರ ಕಾಲದಲ್ಲಿ ಮೈಸೂರು ಸಾಮ್ರಾಜ್ಯಕ್ಕೆ ವಿಸ್ತರಿಸಿ ಇಂದಿಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುತ್ತಿದೆ. ರಾಜಪ್ರಭುತ್ವದ ನಂತರ ಬಂದ ಪ್ರಜಾ ಸರ್ಕಾರಗಳು ದಸರಾ ಆಚರಣೆಗೆ ಕಿಂಚಿತ್ತೂ ಚ್ಯುತಿ ಬರದ ಹಾಗೆ ಆಚರಿಸುತ್ತ ಬಂದಿರುವುದು ನಾಡಿನ ಹಿರಿಮೆಯನ್ನು ಎತ್ತಿ ಹಿಡಿದಿದೆ ಎಂಬ ವಿಚಾರವನ್ನು ಕೃಷ್ಣ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ.

ಇದನ್ನೂ ಓದಿ: SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ

ಇದನ್ನೂ ಓದಿ: ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್