Mysuru Dasara 2023: ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ, ಮೈಸೂರಿನ ನೆಚ್ಚಿನ ತಾಣದ ಬಗ್ಗೆ ಬರೆದು ಬಹುಮಾನ ಗೆಲ್ಲಿ

ಪ್ರವಾಸೋದ್ಯಮ ಇಲಾಖೆ ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಆಯೋಜನೆ ಮಾಡಿದೆ. ಮೊದಲ ಬಹುಮಾನ 30 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 05 ಸಾವಿರ ನಿಗದಿ ಮಾಡಲಾಗಿದೆ. ನೋಂದಾಣಿಗೆ ಕೊನೆ ದಿನಾಂಕ 31/08/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/09/2023.

Mysuru Dasara 2023: ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ, ಮೈಸೂರಿನ ನೆಚ್ಚಿನ ತಾಣದ ಬಗ್ಗೆ ಬರೆದು ಬಹುಮಾನ ಗೆಲ್ಲಿ
ಬ್ರ್ಯಾಂಡಿಂಗ್ ಮೈಸೂರು
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Aug 14, 2023 | 2:24 PM

ಮೈಸೂರು, ಆ.14: ವಿಶ್ವವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಹಿನ್ನೆಲೆ ಪ್ರವಾಸೋದ್ಯಮ ಇಲಾಖೆ (Tourism Department) ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಆಯೋಜನೆ ಮಾಡಿದೆ. ಈ ಸ್ಪರ್ಧೆಯನ್ನು 4 ಹಂತದಲ್ಲಿ ಆಯೋಜಿಸಲಾಗುತ್ತಿದ್ದು ವಿಜೇತರಿಗೆ ಬಹುಮಾನ ನೀಡಲಾಗುತ್ತೆ. ಮೊದಲ ಬಹುಮಾನ 30 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 05 ಸಾವಿರ ನಿಗದಿ ಮಾಡಲಾಗಿದೆ. ನೋಂದಾಣಿಗೆ ಕೊನೆ ದಿನಾಂಕ 31/08/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/09/2023.

  • ಸ್ಪರ್ಧೆ-1 ಆಕರ್ಷಕ ಲೋಗೋ+ ಒಂದು ಸಾಲುನುಡಿ
  • ಸ್ಪರ್ಧೆ -2 ಒಂದು ಸುಂದರ ಶುಭಕಾರಿ
  • ಸ್ಪರ್ಧೆ-3 ವಿಭಿನ್ನವಾದ ಸ್ಮರಣಿಕೆ
  • ಸ್ಪರ್ಧೆ-4 ಮೈಸೂರಿನಲ್ಲಿ ನಿಮ್ಮ ನೆಚ್ಚಿನ ಜಾಗ, ಚಟುವಟಿಕೆಯನ್ನು ವಿವರಿಸುವ ಒಂದು ಮಿಂಬರಹ

ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಹಿನ್ನೆಲೆ ದಸರಾ ಆಚರಣೆ ಸಿದ್ಧತೆ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪನವರ ನೇತೃತ್ವದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಮೈಸೂರು ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವ ಕೆ ವೆಂಕಟೇಶ್, ಶಾಸಕರಾದ ಜಿಟಿ ದೇವೇಗೌಡ, ದರ್ಶನ್ ದೃವನಾರಾಯಣ್, ಎಂಎಲ್ ಸಿ ವಿಶ್ವನಾಥ್, ವಮಂಜೇಗೌಡ, ಮರೀತೀಬ್ಬೆಗೌಡ, ಮೇಯರ್ ಶಿವಕುಮಾರ್, ಡಿಸಿ ಕೆ ವಿ ರಾಜೇಂದ್ರ, ಅರಣ್ಯಧಿಕಾರಿ ಮಾಲತಿ ಪ್ರಿಯ, ನಗರ ಪೋಲೀಸ್ ಕಮಿಷನರ್ ರಮೇಶ್ ಬಾನೋತ್,ಎಸ್ ಪಿ ಸೀಮಾ ಲಾಟ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಮೈಸೂರು ದಸರಾ-2023: ಗಜಪಡೆ ಪಟ್ಟಿ ತಯಾರಿ, ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿರುವ ಆನೆಗಳ ವಿವರ ಇಲ್ಲಿದೆ

ಅರಣ್ಯಧಿಕಾರಿ ಮಾಲತಿ ಪ್ರಿಯ, ದಸರಾ ಕೇಂದ್ರ ಬಿಂದು ಆಗಿರುವ ಗಜಪಡೆಗಳ ಬಗ್ಗೆ ಮಾಹಿತಿ ನೀಡಿದರು. ಆನೆಗಳನ್ನ ಲಾರಿಯಲ್ಲಿ ಕರೆ ತರುವುದು ಸಂಪ್ರದಾಯವಲ್ಲ ಎಂದು ಎಂಎಲ್​ಸಿ ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಮೈಸೂರು ಮಹಾರಾಜರೇ ಆನೆಗಳಿಗೆ ಫಲ ತಾಂಬುಲ ನೀಡಿ ಕರೆ ತರುತ್ತಿದ್ದರು. ಆನೆಗಳನ್ನು ಕಾಲ್ನಡಿಗೆಯಲ್ಲಿಯೇ ಕರೆ ತಂದರೆ ಒಳ್ಳೆಯದು ಎಂದು ಸಭೆಯಲ್ಲಿ ಎಂಎಲ್​ಸಿ ಹೆಚ್ ವಿಶ್ವನಾಥ್ ಸಲಹೆ ನೀಡಿದರು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:22 pm, Mon, 14 August 23

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ