Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗೃಹ ಇಲಾಖೆ ಸೂಚನೆ ಬೆನ್ನಲ್ಲೇ ಮೈಸೂರಿನಲ್ಲಿ ಖಾಕಿ ಹೈ ಅಲರ್ಟ್, ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಅರಮನೆ ಪರಿಶೀಲನೆ

ಮೈಸೂರು ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ಕೊಟ್ಟ ಬೆನ್ನಲೆ ಖಾಕಿ ಹೈ ಅಲರ್ಟ್ ಆಗಿದೆ. ದಸರಾ ಮೇಲೆ ಉಗ್ರರ ಕರಿ ನೆರಳು ಬೀಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ತಪಾಸಣಾ ಕಾರ್ಯ ನಡೆದಿದೆ.

ಕೇಂದ್ರ ಗೃಹ ಇಲಾಖೆ ಸೂಚನೆ ಬೆನ್ನಲ್ಲೇ ಮೈಸೂರಿನಲ್ಲಿ ಖಾಕಿ ಹೈ ಅಲರ್ಟ್, ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಅರಮನೆ ಪರಿಶೀಲನೆ
ಮೈಸೂರಿನಲ್ಲಿ ಖಾಕಿ ಹೈ ಅಲರ್ಟ್
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 24, 2023 | 11:48 AM

ಮೈಸೂರು, ಅ.24:ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ (Mysuru Dasara 2023) ಕ್ಷಣಗಣನೆ ಶುರುವಾಗಿದೆ. ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂಸವಾರಿ (Jamboo Savari) ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ.

ಮೈಸೂರು ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ಕೊಟ್ಟ ಬೆನ್ನಲೆ ಖಾಕಿ ಹೈ ಅಲರ್ಟ್ ಆಗಿದೆ. ದಸರಾ ಮೇಲೆ ಉಗ್ರರ ಕರಿ ನೆರಳು ಬೀಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ತಪಾಸಣಾ ಕಾರ್ಯ ನಡೆದಿದೆ. ಅರಮನೆಯ ಇಂಚಿಂಚೂ ಬಿಡದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 47 ಟ್ಯಾಬ್ಲೊಗಳನ್ನ  ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.

ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಹಿನ್ನೆಲೆ ಪೊಲೀಸ್‌ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗೆ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಮೈಸೂರಿಗೆ ಆಗಮಿಸಿರುವ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: Mysore Dasara: ಆನೆ ಲದ್ದಿ ತುಳಿದರೆ ಒಳಿತಾಗುತ್ತದೆ ಎಂಬ ನಂಬಿಕೆ; ಅದನ್ನು ತುಳಿದು ಸಂಭ್ರಮಿಸಿದ ಮೈಸೂರು ನಿವಾಸಿಗಳು

ತಪಾಸಣೆ ಮಾಡಿ ಅರಮನೆ ಪ್ರವೇಶಕ್ಕೆ ಅವಕಾಶ

ಇನ್ನು 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ‌ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನೆರವೇರಲಿದೆ.

ಜಂಬೂಸವಾರಿಯಲ್ಲಿ ಭಾಗವಹಿಸುವ ಆನೆಗಳ ಅಂತಿಮ ಪಟ್ಟಿ ಹೀಗಿದೆ

ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆ ಹೆಜ್ಜೆ ಹಾಕಲಿವೆ. ಅಭಿಮನ್ಯು, ವಿಜಯ, ವರಲಕ್ಷ್ಮೀ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮೀ, ಹಿರಣ್ಯ ಆನೆ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು