ಸೆ.1ಕ್ಕೆ ಮೈಸೂರಿಗೆ ಗಜ ಪಡೆ ಆಗಮನ, ಈ ಬಾರಿ ದಸರಾ ಉದ್ಘಾಟನೆ ಮಾಡುವವರು ಯಾರು? ಜಿಲ್ಲಾ ಉಸ್ತುವಾರಿ ಸಚಿವ ಹೇಳಿದ್ದಿಷ್ಟು

ಈ ಬಾರಿ ಮೈಸೂರು ದಸರಾಗೆ ಗಜ ಪಡೆ ಯಾವಾಗ ಆಗಮಿಸಲಿದೆ? ಯಾರು ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ? ಎನ್ನುವ ಬಗ್ಗೆ ಸಚಿವ ಡಾ ಹೆಚ್​ಸಿ ಮಹಾದೇವಪ್ಪ ಮಾಹಿತಿ ನೀಡಿದ್ದಾರೆ.

ಸೆ.1ಕ್ಕೆ ಮೈಸೂರಿಗೆ ಗಜ ಪಡೆ ಆಗಮನ, ಈ ಬಾರಿ ದಸರಾ ಉದ್ಘಾಟನೆ ಮಾಡುವವರು ಯಾರು? ಜಿಲ್ಲಾ ಉಸ್ತುವಾರಿ ಸಚಿವ ಹೇಳಿದ್ದಿಷ್ಟು
ಡಾ ಹೆಚ್​ಸಿ ಮಹಾದೇವಪ್ಪ
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2023 | 2:06 PM

ಮೈಸೂರು, (ಆ.07): ವಿಶ್ವವಿಖ್ಯಾತ ಮೈಸೂರು ದಸರಾವನ್ನು (Mysuru Dasara 2023) ಈ ಬಾರಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 15 ರಂದು ಸಿಎಂ ಸಿದ್ದರಾಮಯ್ಯ(Siddaramaiah) ದಸರಾಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ದಸರಾ ಸಿದ್ಧತೆಗಳು ಶುರುವಾಗಿವೆ. ಇನ್ನು ಮೈಸೂರು ದಸರಾ ಕಳೆ ಹೆಚ್ವಿಸಲು ಗಜ ಪಡೆ ಇದೇ ಸೆಪ್ಟೆಂಬರ್ ‌1ಕ್ಕೆ ಆಗಮಿಸಲಿವೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Mysuru Dasara 2023: ಇದೇ ಮೊದಲ ಬಾರಿಗೆ ಪಟಾಕಿ ಸಿಡಿಸಿ ದಸರಾ ಆನೆಗಳಿಗೆ ಅಭ್ಯಾಸ, ಗಜಪಡೆಗಳ ಪ್ರೆಗ್ನೆನ್ಸಿ ಟೆಸ್ಟ್ ವರದಿಗಾಗಿ ಕಾದು ಕುಳಿತ ಅಧಿಕಾರಿಗಳು

ಮೈಸೂರಿನಲ್ಲಿ ಇಂದು(ಆಗಸ್ಟ್ 07) ಸುದ್ದಿಗಾರರೊಮದಿಗೆ ಮಾತನಾಡಿದ ಸಚಿವ ಡಾ.ಎಚ್.ಸಿ ಮಹದೇವಪ್ಪ, ಸೆಪ್ಟೆಂಬರ್ ‌1ಕ್ಕೆ ಮೈಸೂರಿಗೆ ಗಜ ಪಡೆ ಆಗಮಿಸಲಿದ್ದು, ಮೈಸೂರು ಜಿಲ್ಲಾಡಳಿತ ಸ್ವಾಗತದಿಂದ ಸ್ವಾಗತಿಸಲಾಗುತ್ತದೆ. ಇನ್ನು ಈ ಬಾರಿ 14 ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ಆಗಮನವಾಗಲಿದ್ದು, ಹುಣಸೂರು ತಾಲ್ಲೂಕು ವೀರನ ಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ಇದೇ ವೇಳೆ ಈ ಬಾರಿಯ ಮೈಸೂರು ದಸರಾಗೆ ರಾಜ್ಯ ಸರ್ಕಾರದಿಮದ ವಿಶೇಷ ಅನುದಾನ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಸರಾಗೆ ವಿಶೇಷ ಅನುದಾನ ಕೇಳಿಲ್ಲ. ಅದ್ದೂರಿ ದಸರಾಗೆ ಬೇಕಾಗುವಷ್ಟು ಅನುದಾನ ಕೊಡುತ್ತೇವೆ. ದಸರಾ ಉದ್ಘಾಟಕರ ಆಯ್ಕೆ ತೀರ್ಮಾನವನ್ನು ಮುಖ್ಯಂಂತ್ರಿ ವಿವೇಚನೆಗೆ ಬಿಟ್ಟಿದ್ದೇವೆ. ಸಿಎಂ ಅವರೇ ಉದ್ಘಾಟಕರ ಹೆಸರು ತೀರ್ಮಾನ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಭರದಿಂದ ಸಾಗಿದ ಆನೆಗಳ ಆಯ್ಕೆ‌ ಪ್ರಕ್ರಿಯೆ

ಮತ್ತೊಂದೆಡೆ ಈಗಾಗಲೇ ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ. ನಾಗರಹೊಳೆ ಬಂಡೀಪುರದ ವಿವಿಧ ಆನೆ ಕ್ಯಾಂಪ್‌ಗಳಿಗೆ ತೆರಳಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಇನ್ನು ಬಳ್ಳೆ ರಾಂಪುರ ಆನೆ ಶಿಬಿರದಲ್ಲಿರುವ ದಸರಾ ಆನೆಗಳ ಪರಿಶೀಲನೆ ನಡೆದಿದೆ. ನಾಗರಹೊಳೆ, ಬಂಡೀಪುರ ಸೇರಿ ಹಲವು ಕ್ಯಾಂಪ್‌ಗಳಲ್ಲಿ ಮೈಸೂರು ಡಿಸಿಎಫ್ ಸೌರಭ್ ಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆದಿದೆ. ಈ ಬಾರಿಯೂ ಅರ್ಜುನ ದಸರಾದಲ್ಲಿ ಭಾಗವಹಿಸುವುದು ಖಚಿತವಾಗಿದ್ದು, ಜಂಬೂಸವಾರಿ ವೇಳೆ ಅರ್ಜುನ ಆನೆ ಮಂಚೂಣಿಯಲ್ಲಿ ಹೆಜ್ಜೆ ಹಾಕಲಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ಮೈಸೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:23 pm, Mon, 7 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು