Kannada News Karnataka Mysuru Mysuru Dasara 2023 Here are the age, weight, height details of the elephants participating in the Jumboo Savari
ಮೈಸೂರು ದಸರಾ: ಜಂಬೂ ಸವಾರಿಯಲ್ಲಿ ಭಾಗಿಯಾಗುವ ಆನೆಗಳ ವಯಸ್ಸು, ತೂಕ, ಎತ್ತರ ವಿವರಗಳು ಇಲ್ಲಿದೆ
ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ. ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೊದಲ ಹಂತವಾಗಿ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು ಸೇರಿದಂತೆ ಅನೇಕ ಆನೆಗಳು ಮೈಸೂರಿಗೆ ಆಗಮಿಸಿವೆ. ಹಾಗಿದ್ದರೆ ಯಾವೆಲ್ಲ ಆನೆಗಳು ಈ ಬಾರಿ ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ? ಅವುಗಳ ವಯಸ್ಸು, ತೂಕ ಇತ್ಯಾದಿ ಮಾಹಿತಿ ಇಲ್ಲಿದೆ.
Ad
ಆನೆ ಅಭಿಮನ್ಯು ನೇತೃತ್ವದಲ್ಲಿ ಸಾಗಲಿರುವ ಮೈಸೂರು ಜಂಬೂ ಸವಾರಿ
ಮೈಸೂರು, ಸೆ.2: ಐತಿಹಾಸಿಕ ಮೈಸೂರು ದಸರಾ(Mysuru Dasara 2023) ಉತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ. ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೊದಲ ಹಂತವಾಗಿ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು ಸೇರಿದಂತೆ ಅನೇಕ ಆನೆಗಳು ಮೈಸೂರಿಗೆ ಆಗಮಿಸಿವೆ. ಹಾಗಿದ್ದರೆ ಯಾವೆಲ್ಲ ಆನೆಗಳು ಈ ಬಾರಿ ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ? ಅವುಗಳ ವಯಸ್ಸು, ತೂಕ ಇತ್ಯಾದಿ ಮಾಹಿತಿ ಇಲ್ಲಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಹೋತ್ಸವಕ್ಕೆ 14 ಆನೆಗಳು ಆಗಮಿಸಲಿವೆ. ನೆನ್ನೆಯಷ್ಟೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ತಂಡಕ್ಕೆ ಸಂಪ್ರದಾಯಿಕ ಪೂಜೆ ನೆರವೇರಿಸಲಾಗಿದ್ದು, ಮೈಸೂರಿನ ಅರಣ್ಯ ಭವನದಲ್ಲಿ ಆನೆಗಳನ್ನು ನೋಡಿಕೊಳ್ಳಲಾಗುತ್ತಿದೆ.
ಹಿರಣ್ಯ 46 ವರ್ಷ, ರಾಮಾಪುರ ಆನೆ ಶಿಬಿರ, 250ಮೀ ಎತ್ತರ, 3000 ರಿಂದ 3200 ಕೆ.ಜಿ
ಅರ್ಜುನ ಆನೆ ಈ ಬಾರಿಯ ದಸರಾ ಮಹೋತ್ಸವದ ಹಿರಿಯ ವಯಸ್ಸಿನ ಆನೆಯಾಗಿದೆ. ರೋಹಿತ್ ಅತ್ಯಂತ್ಯ ಕಿರಿಯ ವಯಸ್ಸಿನ ಆನೆ ಹಾಗೂ ಮೊದಲ ಬಾರಿಗೆ ದಸರಾದಲ್ಲಿ ಭಾಗಿಯಾಗುತ್ತಿದ್ದಾನೆ. ಕಂಜನ್, ಲಕ್ಷ್ಮಿ, ಹಿರಣ್ಯ ಆನೆಗಳಿಗೂ ಇದು ಮೊದಲ ದಸರಾ ಮಹೋತ್ಸವವಾಗಿದೆ.