ಮೈಸೂರು, ಅ.05: ವಿಶ್ವ ವಿಖ್ಯಾತ ಮೈಸೂರು ದಸರಾಗೆ (Mysuru Dasara 2023) ದಿನಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಸಾಂಪ್ರದಾಯಿಕ ಹಾಗೂ ಅರ್ಥಪೂರ್ಣ ದಸರಾ ಆಚರಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜೊತೆಗೆ ಮೈಸೂರು ಅರಮನೆಯಲ್ಲೂ ರಾಜ ಪರಂಪರೆ ದಸರಾಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ. ಸದ್ಯ ಅರಮನೆ ಪೂಜಾ ಕಾರ್ಯಕ್ರಮಗಳ ಪಟ್ಟಿ ಟಿವಿ9ಗೆ ಲಭ್ಯವಾಗಿದೆ. ಅ.9ರ ಸೋಮವಾರದಂದು ಬೆಳಗ್ಗೆ 10.05ರಿಂದ 10.35ರ ಶುಭ ಲಗ್ನದಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ ಮಾಡಲಾಗುತ್ತೆ. ಇದಕ್ಕೂ ಮುಂಚೆ ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿವಿಧಾನ ನೆರವೇರಲಿದೆ. ಬನ್ನಿ ಅರಮನೆ ಪೂಜಾ ಕಾರ್ಯಕ್ರಮಗಳ ಕಂಪ್ಲೀಟ್ ಪಟ್ಟಿ ಇಲ್ಲಿದೆ.
ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:13 am, Thu, 5 October 23