Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ನಾಳೆ ಮೈಸೂರಿಗೆ, ಗಜಪಡೆಗೆ ಪುಷ್ಪಾರ್ಚನೆ

Mysuru Dasara 2024: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗರುವ ಗಜ ಪಡೆ ಬುಧವಾರ ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಪ್ರವೇಶಿಸಲಿವೆ. ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದ್ದು, ಗಜ ಪಡೆಗೆ ಪುಷ್ಪಾರ್ಚನೆ ನಡೆಯಲಿದೆ.

ಮೈಸೂರು ದಸರಾ: ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ನಾಳೆ ಮೈಸೂರಿಗೆ, ಗಜಪಡೆಗೆ ಪುಷ್ಪಾರ್ಚನೆ
ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ನಾಳೆ ಮೈಸೂರಿಗೆ, ಗಜಪಡೆಗೆ ಪುಷ್ಪಾರ್ಚನೆ
Follow us
ರಾಮ್​, ಮೈಸೂರು
| Updated By: Ganapathi Sharma

Updated on:Aug 21, 2024 | 1:47 PM

ಮೈಸೂರು, ಆಗಸ್ಟ್ 20: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗಾಗಿ ದಸರಾ ಗಜಪಡೆ ಬುಧವಾರ ಮೈಸೂರಿಗೆ ಆಗಮಿಸಲಿದೆ. ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ.

ಬುಧವಾರ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ.

ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ದಸರಾಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಕೆಲವೇ ದಿನಗಳ ಹಿಂದೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭು ವೀರನಹೊಸಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಬಾರಿ ಗಜಪಯಣಕ್ಕೆ ವಿಶೇಷ ರೀತಿಯ ರಂಗು ನೀಡುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಗಜಪಯಣ ನಡೆಯುವ ಜಾಗದಲ್ಲಿ ವಿಶಿಷ್ಟ ರೀತಿಯ ಅಲಂಕಾರಕ್ಕೆ ತಯಾರಿ ನಡೆದಿದೆ. ವೀರನಹೊಸಹಳ್ಳಿ ಮುಖ್ಯ ದ್ವಾರದ ಬಳಿ ಪೂಜೆ ನಡೆಸುವ ಸ್ಥಳದಲ್ಲಿ ವಿಶೇಷ ಕಮಾನು ನಿರ್ಮಿಸಲಿದ್ದೇವೆ. ನಾಡಹಬ್ಬಕ್ಕೆ ಹೊಸ ಹೊಳಪು ನೀಡುವ ದೃಷ್ಟಿಕೋನದಲ್ಲಿ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಭು ತಿಳಿಸಿದ್ದರು.

ಇದನ್ನೂ ಓದಿ: ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

ದಸರಾ ಅನೆಗಳೊಂದಿಗೆ ಮೈಸೂರಿಗೆ ಆಗಮಿಸುವ ಮಾವುತ ಮತ್ತು ಕಾವಾಡಿಗಳಿಗೆ ತಲಾ 5 ಲಕ್ಷ ರೂಪಾಯಿ ಮೌಲ್ಯದ ವಿಮೆ ಸೌಕರ್ಯ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Tue, 20 August 24

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ