AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಶಿಥಿಲಕಟ್ಟಡ, ಮರಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧ

ಮೈಸೂರು ದಸರಾ 2026 ಮಹೋತ್ಸವದ ಸಕಲ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. 6000ಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜಿಸಲಾಗಿದ್ದು, ಸಾವಿರಾರೂ ಸಿಸಿ ಕ್ಯಾಮರಾ ಮೂಲಕ ಸಾರ್ವಜನಿಕರ ಮೇಲೆ ಕಣ್ಗಾವಲಿಡಲಾಗುತ್ತಿದೆ. ಶಿಥಿಲ ಕಟ್ಟಡ, ಮರಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧಿಸಲಾಗಿದೆ. ಈ ಕುರಿತಾಗಿ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಮೈಸೂರು ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಶಿಥಿಲಕಟ್ಟಡ, ಮರಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧ
ಮೈಸೂರು ದಸರಾ, ಸೀಮಾ ಲಾಟ್ಕರ್ Image Credit source: tv9 kannada
ರಾಮ್​, ಮೈಸೂರು
| Edited By: |

Updated on: Oct 09, 2026 | 3:13 PM

Share

ಮುಖ್ಯಾಂಶಗಳು

  • ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026
  • ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
  • ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಹೇಳಿಕೆ

ಮೈಸೂರು, ಅಕ್ಟೋಬರ್​​ 09: ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ವಿಶ್ವ ವಿಖ್ಯಾತ ದಸರಾ ಕಣ್ತುಂಬಿಕೊಳ್ಳಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ದಸರಾ ಮಹೋತ್ಸವದ ಕಾರ್ಯಗಳು ಜೋರಾಗಿ ನಡೆದಿವೆ. ಈ ಬಾರಿಯ ದಸರಾ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಶಿಥಿಲಗೊಂಡ ಕಟ್ಟಡ ಮತ್ತು ಮರಗಳಲ್ಲಿ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಹೇಳಿದ್ದಾರೆ.

ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಸೀಮಾ ಲಾಟ್ಕರ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸೀಮಾ ಲಾಟ್ಕರ್, ‘ಈ ಬಾರಿಯ ನಾಡ ಹಬ್ಬ ಮೈಸೂರು ದಸರಾಗೆ 5,161 ಸಿವಿಲ್ ಹಾಗೂ ಸಂಚಾರಿ ಪೊಲೀಸರು, 33 ಕೆಎಸ್​​ಆರ್​ಪಿ ತುಕಡಿ, 25 ಡಿಎಆರ್​ ತುಕಡಿ, 1500 ಹೋಮ್​ ಗಾರ್ಡ್​ಗಳು ಸೇರಿದಂತೆ ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಸಾರ್ವಜನಿಕರ ಮೇಲೆ 35,794 ಸಿಸಿ ಕ್ಯಾಮರಾ ಕಣ್ಗಾವಲು

‘ದಸರಾದ 11 ದಿನ ಒಟ್ಟು 18 ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಬಳಕೆ ಮಾಡಿಕೊಳ್ಳಬಹುದಾಗಿದೆ. ಇನ್ನು ಅರಮನೆ ಸುತ್ತಮುತ್ತ ಪ್ರಮುಖ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇರಲಿದ್ದು, 35,794 ಸಿಸಿ ಕ್ಯಾಮರಾ ಮೂಲಕ ಸಾರ್ವಜನಿಕರ ಮೇಲೆ ಕಣ್ಗಾವಲು ಇರಲಿದೆ’ ಎಂದು ಅವರು ತಿಳಿಸಿರು.

LIVE TV

ಶಿಥಿಲಗೊಂಡ ಕಟ್ಟಡ, ಮರಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧ

ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆ ಎಂದರೆ ಜಂಬೂಸವಾರಿ. ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನರು ಕಾಯುತ್ತಿದ್ದಾರೆ. ಆದರೆ ‘ಶಿಥಿಲಗೊಂಡಿರುವ ಕಟ್ಟಡ ಮತ್ತು ಮರಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧಿಸಲಾಗಿದೆ. ಈಗಾಗಲೇ 92 ಹಳೆಯ ಕಟ್ಟಡಗಳನ್ನು ಗುರುತು ಮಾಡಲಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್​ ಖಡಕ್​​ ಎಚ್ಚರಿಕೆ ನಿಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More