AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಸರಾ ಆನೆಗಳ ಹೃದಯದ ಆರೋಗ್ಯ ತಪಾಸಣೆಗಾಗಿ ಇಸಿಜಿ (ECG) ಪರೀಕ್ಷೆ ಹಾಗೂ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ನಡೆಸಲಾಗುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು
ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಶುರುImage Credit source: tv9
ರಾಮ್​, ಮೈಸೂರು
| Edited By: |

Updated on: Jul 07, 2026 | 11:45 AM

Share

ಮುಖ್ಯಾಂಶಗಳು

  • ಮೊದಲ ಬಾರಿಗೆ ದಸರಾ ಆನೆಗಳಿಗೆ ಇಸಿಜಿ ಪರೀಕ್ಷೆ
  • ಗರ್ಭಧಾರಣೆ ಪತ್ತೆಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವ್ಯವಸ್ಥೆ
  • ವಿಜಯದಶಮಿ ತಡವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ತಡವಾಗಿ ಬರಲಿವೆ ಆನೆಗಳು

ಮೈಸೂರು, ಜುಲೈ 7: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ (Mysuru Dasara 2026) ಆಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ದಸರಾ ಗಜಪಡೆಯ ಆಯ್ಕೆ ಪ್ರಕ್ರಿಯೆಗೆ ಅರಣ್ಯ ಇಲಾಖೆ ಚಾಲನೆ ನೀಡಿದೆ. ವಿವಿಧ ಆನೆ ಶಿಬಿರಗಳಲ್ಲಿರುವ ಗಜಪಡೆಯ ಆರೋಗ್ಯ ತಪಾಸಣೆ ಅತ್ಯಂತ ವೈಜ್ಞಾನಿಕ ಹಾಗೂ ಸುಧಾರಿತ ಮಾದರಿಯಲ್ಲಿ ಪ್ರಗತಿಯಲ್ಲಿದೆ ಎಂದು ಮೈಸೂರು (Mysuru) ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ತಿಳಿಸಿದೆ.

ಶಿಬಿರಗಳಿಗೆ ತಜ್ಞ ವೈದ್ಯರ ಭೇಟಿ, ಸ್ಯಾಂಪಲ್ ಸಂಗ್ರಹ

ದಸರಾ ಮಹೋತ್ಸವದ ಅಂಗವಾಗಿ ಮತ್ತಿಗೋಡು, ದುಬಾರೆ ಮತ್ತು ರಾಮಾಪುರ ಆನೆಗಳ ಶಿಬಿರಗಳಿಗೆ ಪಶುವೈದ್ಯಾಧಿಕಾರಿಗಳ ವಿಶೇಷ ತಜ್ಞರ ತಂಡವು ಈಗಾಗಲೇ ಭೇಟಿ ನೀಡಿದೆ. ಶಿಬಿರಗಳಲ್ಲಿರುವ ಸುಮಾರು 20ಕ್ಕೂ ಹೆಚ್ಚು ಆನೆಗಳ ಆರೋಗ್ಯವನ್ನು ಕೂಲಂಕಷವಾಗಿ ತಪಾಸಣೆ ಮಾಡಲಾಗಿದ್ದು, ತದನಂತರ ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು (Samples) ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ಇತಿಹಾಸದಲ್ಲೇ ಮೊದಲು ಇಸಿಜಿ ಮತ್ತು ಸ್ಕ್ಯಾನಿಂಗ್

ಗಜಪಡೆಯ ಇತಿಹಾಸದಲ್ಲೇ ಈ ಬಾರಿ ಅತ್ಯಂತ ಅಪರೂಪದ ಹಾಗೂ ಪ್ರಮುಖ ಹೆಜ್ಜೆಯೊಂದನ್ನು ಅರಣ್ಯ ಇಲಾಖೆ ಇರಿಸಿದೆ. ಶಿಬಿರಗಳಲ್ಲಿರುವ ಹೆಣ್ಣಾನೆಗಳ ಗರ್ಭಧಾರಣೆಯನ್ನು ನಿಖರವಾಗಿ ಪರೀಕ್ಷಿಸಲು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (Ultrasound Scanning) ಮುಖಾಂತರ ತಪಾಸಣೆ ನಡೆಸುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜೊತೆಗೆ, ಅತ್ಯಂತ ಪ್ರಮುಖವಾಗಿ ಈ ಬಾರಿ ಮೊಟ್ಟಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಮತ್ತು ಸಾಮರ್ಥ್ಯವನ್ನು ಪರೀಕ್ಷಿಸಲು ಇಸಿಜಿ (ECG) ಪರೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಪ್ರಯೋಗಾಲಯಗಳಿಂದ ವೈದ್ಯಕೀಯ ವರದಿಗಳು ಬಂದ ತಕ್ಷಣ, ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದ ಅಧಿಕೃತ ತಂಡವು ವಿವಿಧ ಆನೆ ಶಿಬಿರಗಳಿಗೆ ಖುದ್ದಾಗಿ ಭೇಟಿ ನೀಡಿ ಅಂತಿಮವಾಗಿ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ. ಆನೆಗಳ ಈ ತಾತ್ಕಾಲಿಕ ಆಯ್ಕೆಯ ಪಟ್ಟಿಯನ್ನು ಎಲ್ಲಾ ಆರೋಗ್ಯ ವಿವರಗಳೊಂದಿಗೆ ರಾಜ್ಯ ಮಟ್ಟದ ದಸರಾ ಆನೆಗಳ ಆಯ್ಕೆ ಸಮಿತಿಗೆ ಸಲ್ಲಿಕೆ ಮಾಡಲಾಗುತ್ತದೆ.

ಈ ಬಾರಿ 20 ದಿನ ತಡವಾಗಿ ಬರಲಿವೆ ಆನೆಗಳು

2026ನೇ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯು ಕಳೆದ ಸಾಲಿಗಿಂತ ಈ ಬಾರಿ ಸುಮಾರು 20 ದಿನಗಳು ತಡವಾಗಿ ಬರಲಿದೆ. ಈ ಕಾರಣದಿಂದಾಗಿ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಹಾಗೂ ಗಜಪಯಣದ ಸಿದ್ಧತೆಗಳನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಕೊಂಚ ತಡವಾಗಿಯೇ ಆರಂಭಿಸಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆಷಾಢ ಮಾಸದಲ್ಲಿ ಚಾಮುಂಡಿ ದರ್ಶನ: ಈ ಬಾರಿ 300 ರೂ. ಟಿಕೆಟ್ ರದ್ದು! ಭಕ್ತರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ