AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ: ಅಂಬಾರಿ ಹೊತ್ತು ಸಾಗಲಿರುವ ಪ್ರಶಾಂತ, ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದು, ಒಟ್ಟು 12 ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ರಾತ್ರಿ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮತ್ತು ಡ್ರೋನ್ ಪ್ರದರ್ಶನ ನಡೆಯಲಿವೆ.

ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ: ಅಂಬಾರಿ ಹೊತ್ತು ಸಾಗಲಿರುವ ಪ್ರಶಾಂತ, ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ
ಮೈಸೂರು ದಸರಾ ಜಂಬೂಸವಾರಿ (ಸಂಗ್ರಹ ಚಿತ್ರ)
ರಾಮ್​, ಮೈಸೂರು
| Edited By: |

Updated on: Oct 21, 2026 | 7:04 AM

Share

ಮುಖ್ಯಾಂಶಗಳು

  • ಮೊದಲ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಕ್ಯಾಪ್ಟನ್ ಪ್ರಶಾಂತ
  • 48 ಕಲಾತಂಡಗಳು, 53 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗಿ
  • ಸಂಜೆ 4.35ಕ್ಕೆ ಜಂಬೂಸವಾರಿ, ರಾತ್ರಿ ಡ್ರೋನ್ ಪ್ರದರ್ಶನ

ಮೈಸೂರು, ಅಕ್ಟೋಬರ್ 21: ನಾಡಿನೆಲ್ಲೆಡೆ ಇಂದು ವಿಜಯದಶಮಿ ಸಂಭ್ರಮ ಮನೆಮಾಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂತಿಮ ದಿನದ ಸಂಭ್ರಮ ಕಳೆಗಟ್ಟಿದ್ದು, ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆಯಲ್ಲಿ ನವರಾತ್ರಿ ಉತ್ಸವದ ಕೊನೆಯ ದಿನದ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಸಂಜೆ ಚಾಮುಂಡೇಶ್ವರಿ ಉತ್ಸವಮೂರ್ತಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಮೆರವಣಿಗೆಯಲ್ಲಿ ಸಾಗಲಿದ್ದಾಳೆ.

ಅರಮನೆಯಲ್ಲಿ ಮಂಗಳವಾರ ರಾಜಪರಿವಾರದ ವತಿಯಿಂದ ಆಯುಧ ಪೂಜೆ ನೆರವೇರಿಸಲಾಗಿತ್ತು. ಇಂದು ವಿಜಯದಶಮಿಯ ಅಂಗವಾಗಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಚಾಮುಂಡೇಶ್ವರಿ ಉತ್ಸವಮೂರ್ತಿ ಇರುವ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಲಿದೆ. ಒಟ್ಟು 12 ಆನೆಗಳು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದು, ಈ ಹಿಂದೆ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಮೆರವಣಿಗೆಯಲ್ಲಿ ಸಾಗಲಿದೆ.

ಮೈಸೂರು ದಸರಾ ಜಂಬೂಸವಾರಿ: ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ

ವಿಜಯದಶಮಿಯ ದಿನವಾದ ಇಂದು ಬೆಳಗ್ಗೆಯಿಂದಲೇ ಅರಮನೆ ಆವರಣದಲ್ಲಿ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. ಜಂಬೂಸವಾರಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳ ವೇಳಾಪಟ್ಟಿ ಹೀಗಿದೆ;

  • ಬೆಳಗ್ಗೆ 8.30: ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಜಟ್ಟಿಕಾಳಗ
  • ಬೆಳಗ್ಗೆ 10: ವಜ್ರಮುಷ್ಟಿ ಕಾಳಗ
  • ಬೆಳಗ್ಗೆ 10.30: ಯದುವೀರ್ ಅವರ ವಿಜಯಯಾತ್ರೆ
  • ಬೆಳಗ್ಗೆ 11: ಯದುವೀರ್ ಅವರಿಂದ ಬನ್ನಿಮರಕ್ಕೆ ಪೂಜೆ ಹಾಗೂ ಚಾಮುಂಡೇಶ್ವರಿ ಉತ್ಸವಮೂರ್ತಿಯ ಅರಮನೆ ಪ್ರವೇಶ
  • ಮಧ್ಯಾಹ್ನ 1.36ರಿಂದ 1.50: ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಂದ ಪೂಜೆ
  • ಸಂಜೆ 4.10ರಿಂದ 4.35: ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ
  • ಸಂಜೆ 4.35: ಅಂಬಾವಿಲಾಸ ಅರಮನೆಯಿಂದ ವಿಶ್ವವಿಖ್ಯಾತ ಜಂಬೂಸವಾರಿ ಆರಂಭ
  • ಸಂಜೆ 7: ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು
  • ರಾತ್ರಿ 8: ಬನ್ನಿಮಂಟಪ ಮೈದಾನದಲ್ಲಿ ಡ್ರೋನ್ ಪ್ರದರ್ಶನ

ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಬಳಿಕ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಲಿದೆ.

48 ಕಲಾತಂಡಗಳು, 53 ಸ್ತಬ್ಧಚಿತ್ರಗಳು ಭಾಗಿ

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 48 ಕಲಾತಂಡಗಳು ಹಾಗೂ 53 ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಕರ್ನಾಟಕದ ಜಾನಪದ ಕಲಾತಂಡಗಳ ಜೊತೆಗೆ ತಮಿಳುನಾಡು, ಕೇರಳ ಮತ್ತು ಮಣಿಪುರದ ಕಲಾವಿದರೂ ತಮ್ಮ ಪ್ರದರ್ಶನಗಳ ಮೂಲಕ ಮೆರವಣಿಗೆಗೆ ಮೆರುಗು ನೀಡಲಿದ್ದಾರೆ.

ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ನಗಾರಿ, ಪೂಜಾ ಕುಣಿತ, ಗೊರವನ ಕುಣಿತ, ತಮಟೆ ಮತ್ತು ಕೋಲಾಟ ಸೇರಿದಂತೆ ವಿವಿಧ ಜಾನಪದ ಕಲಾಪ್ರಕಾರಗಳು ಜನರ ಗಮನ ಸೆಳೆಯಲಿವೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ತುಕಡಿಗಳೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಆನೆಗಳಿಗೆ ಪೂಜೆ; ಸಂಪ್ರದಾಯಕ್ಕೆ ವಿಶೇಷ ಮಹತ್ವ

ದಸರಾ ಸಂಪ್ರದಾಯದಂತೆ ವಿಜಯದಶಮಿಯ ಮುನ್ನಾದಿನ ದೇವರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಾಯಿತು. ಚಿನ್ನದ ಅಂಬಾರಿ ಹೊರುವ ಆನೆ ಹಾಗೂ ಕುಮ್ಕಿ ಆನೆಗಳಿಗೂ ಪೂಜೆ ನೆರವೇರಿಸಲಾಯಿತು. ಮೈಸೂರು ದಸರಾ ತನ್ನ ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ವೈಭವದೊಂದಿಗೆ ವಿಜಯದಶಮಿಯ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953