AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾಗೆ ಪೊಲೀಸರ ಬ್ರೇಕ್, ಪುರಭವನದಲ್ಲಿ ಅವಕಾಶ

ಮೈಸೂರು ದಸರಾ ಸಂಭ್ರಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಜಂಬೂಸವಾರಿ ಗೋಲ್ಡ್ ಪಾಸ್‌ಗಳ ಕಾಳಸಂತೆ ಮಾರಾಟದ ಆರೋಪವೂ ಕೇಳಿಬಂದಿದೆ. ಮತ್ತೊಂದೆಡೆ, ಗಜಪಡೆಯ ಸಿಡಿಮದ್ದು ತಾಲೀಮು, ದಸರಾ ಭದ್ರತೆ, ಕಂಬಳ ಹಾಗೂ ತುಮಕೂರು ದಸರಾ ಸಿದ್ಧತೆಗಳು ಗಮನ ಸೆಳೆದಿವೆ.

ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾಗೆ ಪೊಲೀಸರ ಬ್ರೇಕ್, ಪುರಭವನದಲ್ಲಿ ಅವಕಾಶ
ಮೈಸೂರು ದಸರಾ ಸಿದ್ಧತೆImage Credit source: tv9
ರಾಮ್​, ಮೈಸೂರು
| Edited By: |

Updated on: Oct 10, 2026 | 7:19 AM

Share

ಮುಖ್ಯಾಂಶಗಳು

  • ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ನಿರ್ಬಂಧ
  • ಜಂಬೂಸವಾರಿ ಗೋಲ್ಡ್ ಪಾಸ್‌ ಕಾಳಸಂತೆಯಲ್ಲಿ ಮಾರಾಟ ಆರೋಪ
  • ದಸರಾ ಭದ್ರತೆಗೆ ಆರು ಸಾವಿರಕ್ಕೂ ಹೆಚ್ಚು ಪೊಲೀಸರು

ಮೈಸೂರು, ಅಕ್ಟೋಬರ್ 10: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಸಂಭ್ರಮದ ನಡುವೆಯೇ ಮೈಸೂರಿನಲ್ಲಿ ಹಲವು ಬೆಳವಣಿಗೆಗಳು ಮುನ್ನೆಲೆಗೆ ಬಂದಿವೆ. ಒಂದೆಡೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ಪೊಲೀಸರು ನಿರ್ಬಂಧ ವಿಧಿಸಿದ್ದು, ಮತ್ತೊಂದೆಡೆ ಜಂಬೂಸವಾರಿಯ ಗೋಲ್ಡ್ ಪಾಸ್‌ಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾಗೆ ನಿರ್ಬಂಧ

ಮೈಸೂರಿನಲ್ಲಿ ಮಹಿಷಾ ದಸರಾ ಆಚರಣಾ ಸಮಿತಿ ಮಹಿಷಾ ದಸರಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ತೊಂದರೆಯಾಗುವ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ, ನಗರದ ಪುರಭವನದಲ್ಲಿ ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡಲಾಗಿದೆ.

ಜಂಬೂಸವಾರಿ ಗೋಲ್ಡ್ ಪಾಸ್‌ ಕಾಳಸಂತೆಯಲ್ಲಿ ಮಾರಾಟ ಆರೋಪ

ಮೈಸೂರು ದಸರಾ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ಈ ನಡುವೆ ಜಂಬೂಸವಾರಿ ವೀಕ್ಷಣೆಗೆ ನೀಡಲಾಗುವ ಗೋಲ್ಡ್ ಪಾಸ್‌ಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಯಶಸ್ವಿಯಾಗಿ ಪೂರ್ಣಗೊಂಡ ಸಿಡಿಮದ್ದು ತಾಲೀಮು

ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಎರಡನೇ ಹಂತದ ಸಿಡಿಮದ್ದು ತಾಲೀಮು ಯಶಸ್ವಿಯಾಗಿ ಪೂರ್ಣಗೊಂಡಿದೆ. ಏಳು ಫಿರಂಗಿಗಳ ಮೂಲಕ ಮೂರು ಸುತ್ತುಗಳಲ್ಲಿ ಒಟ್ಟು 21 ಬಾರಿ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗಿದೆ. ಸಿಡಿಮದ್ದಿನ ಭಾರೀ ಶಬ್ದಕ್ಕೂ ದಸರಾ ಆನೆಗಳು ಬೆದರದೆ ನಿಂತು ಶಬ್ದಾಭ್ಯಾಸದಲ್ಲಿ ಪಾಲ್ಗೊಂಡಿವೆ.

ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಆನೆ ಔಟ್‌

ಮರದ ಅಂಬಾರಿ ಹೊರುವ ತಾಲೀಮು ವೇಳೆ ಅರ್ಧ ದಾರಿಯಲ್ಲೇ ನಿಂತಿದ್ದ ಮಹೇಂದ್ರ ಆನೆಯನ್ನು ಈ ಬಾರಿಯ ಕ್ಯಾಪ್ಟನ್ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗಿದೆ. ಧನಂಜಯ, ಪ್ರಶಾಂತ, ಸುಗ್ರೀವ ಹಾಗೂ ಏಕಲವ್ಯ ಆನೆಗಳು ಮರದ ಅಂಬಾರಿ ಹೊರುವ ತಾಲೀಮಿನಲ್ಲಿ ಸಮರ್ಥವಾಗಿ ಪಾಲ್ಗೊಳ್ಳುತ್ತಿವೆ.

ದಸರಾ ಭದ್ರತೆಗೆ 6 ಸಾವಿರಕ್ಕೂ ಹೆಚ್ಚು ಪೊಲೀಸರು

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಭದ್ರತೆಗಾಗಿ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಮೈಸೂರು ದಸರಾ ಕಂಬಳಕ್ಕೆ ಕೋಣಗಳ ಆಯ್ಕೆ

ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಲಾಗಿರುವ ಕಂಬಳಕ್ಕೆ ಕೋಣಗಳ ಆಯ್ಕೆ ಪ್ರಕ್ರಿಯೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮೀಯಾರು ಜೋಡುಕೆರೆಯಲ್ಲಿ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’