AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ.

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ
ಮೈಸೂರು ವಿದ್ಯುತ್ ದೀಪಾಲಂಕಾರ
TV9 Web
| Edited By: ಆಯೇಷಾ ಬಾನು|

Updated on: Oct 10, 2021 | 2:33 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಶೇಷ ವಿಭಿನ್ನವಾದ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 10ರವರೆಗೆ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಿಸಲಾಗಿತ್ತು. 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ.

ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ 10 ಗಂಟೆಯವರೆಗೂ ದೀಪಾಲಂಕಾರ ವ್ಯವಸ್ಥೆ ಇರಲಿದೆ. ಮೈಸೂರಿನ ಪ್ರಮುಖ ರಸ್ತೆಗಳಾದ ಜಂಬೂ ಸವಾರಿ ಸಾಗುತ್ತಿದ್ದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅರಮನೆ ಸುತ್ತಮುತ್ತಲಿನ ರಸ್ತೆ, ಚಾಮುಂಡಿಬೆಟ್ಟದ ರಸ್ತೆ ಸೇರಿ ಹಲವು ರಸ್ತೆಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇದರ ಜೊತೆಗೆ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಆಕರ್ಷಕ ಚಿತ್ತಾರವನ್ನು ಮೂಡಿಸಲಾಗಿದೆ. ದಸರಾ ಉದ್ಘಾಟನೆಯಾದ ಅಕ್ಟೋಬರ್ 7 ರಿಂದ ಜಂಬೂಸವಾರಿ ಮೆರವಣಿಗೆ ನಡೆಯುವ ಅಕ್ಟೋಬರ್ 15ರವರೆಗೆ ಈ ವಿದ್ಯುತ್ ದೀಪಾಲಂಕಾರ ಇರಲಿದೆ.

ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘದಿಂದ ಮೈಸೂರಿನಲ್ಲಿ ಸಾಂಪ್ರದಾಯಿಕ ಕುಸ್ತಿ ಆಯೋಜನೆ ಮಾಡಲಾಗಿದೆ. ಮೈಸೂರಿನ ಸಾಹುಕಾರ್ ಎಸ್.ಚನ್ನಯ್ಯ ಕುಸ್ತಿ ಅಖಾಡದಲ್ಲಿ ಆಯೋಜನೆ ಮಾಡಲಾಗಿದೆ. ಕುಸ್ತಿಯ ಅಖಾಡದಲ್ಲಿ‌ ಹಿರಿಯ, ಕಿರಿಯ50 ಜೋಡಿಗಳ ಪೈಲ್ವಾನ್‌ಗಳು ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರ ಈ ಬಾರಿ ಕುಸ್ತಿ ರದ್ದು ಮಾಡಿದೆ ದಸರಾ ಕುಸ್ತಿ ಪರಂಪರೆ ನಿಲ್ಲಬಾರದು ಎಂದು ಕುಸ್ತಿ ಪಟುಗಳಿಂದ ಕುಸ್ತಿ ಆಯೋಜನೆ ಮಾಡಲಾಗಿದೆ.

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

mys dasara lightings

ಮೈಸೂರು ವಿದ್ಯುತ್ ದೀಪಾಲಂಕಾರ

ಇದನ್ನೂ ಓದಿ: ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!

Follow Us
TV9 Web
TV9 Web

TV9 Kannada

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು