AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನ

Mysuru Dasara sponsorship: ಇದೇ ಮೊದಲ ಬಾರಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನಿಸಲಾಗಿದೆ. 3 ಕೋಟಿ ರೂಪಾಯಿಗೆ ನಾಡಹಬ್ಬ ದಸರೆಯ ಟೈಟಲ್ ಪ್ರಯೋಜಕತ್ವ ನೀಡಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಪ್ರಾಯೋಜಕತ್ವಗಳ ಬಗ್ಗೆ ಎಲ್ಲಾ ಅಂಶಗಳನ್ನು ವಿವರಿಸಿದ್ದು, ವಿವರ ಈ ಕೆಳಗಿನಂತಿದೆ.

ಇದೇ ಮೊದಲ ಬಾರಿ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನ
ಮೈಸೂರು ದಸರಾ
ರಮೇಶ್ ಬಿ. ಜವಳಗೇರಾ
|

Updated on: Oct 06, 2023 | 8:59 AM

Share

ಮೈಸೂರು, (ಅಕ್ಟೋಬರ್ 06): ಸಿದ್ದರಾಮಯ್ಯ (Siddaramaiah) ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ತವರು ಜಿಲ್ಲೆಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು (Mysore Dasara 2023) ಈ ಬಾರಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದರು. ಆದ್ರೆ, ಸರಿಯಾದ ಸಮಯಕ್ಕೆ ಮಳೆಯಾಗದಿದ್ದರಿಂದ ಕರ್ನಾಟಕದಲ್ಲಿ ಬರ ಆವರಿಸಿದೆ. ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅದ್ಧೂರಿ ದಸರಾ ಕೈಬಿಟ್ಟು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿದೆ. ಹೀಗಾಗಿ ಸರ್ಕಾರದಿಂದ ಕಡಿಮೆ ಅನುದಾನ ಸಿಗಬಹುದೆಂದು ಜಿಲ್ಲಾಡಳಿತ ಪ್ರಾಯೋಜಕತ್ವದ ಮೊರೆ ಹೋಗಿದೆ.

ಹೌದು… 3 ಕೋಟಿ ರೂಪಾಯಿಗೆ ನಾಡಹಬ್ಬ ದಸರೆಯ ಟೈಟಲ್ ಪ್ರಾಯೋಜಕತ್ವ ನೀಡಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರಾಯೋಜಕತ್ವ ಸಂಬಂಧ ಲಲಿತ್ ಮಹಲ್ ಹೋಟೆಲ್​ನಲ್ಲಿ ನಡೆದ ವಾಣಿಜ್ಯೋದ್ಯಮಿಗಳೊಂದಿನ ಸಭೆಯಲ್ಲಿ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಪ್ರಾಯೋಜಕತ್ವಗಳ ಬಗ್ಗೆ ಎಲ್ಲಾ ಅಂಶಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: Mysore Dasara 2023: ಮೈಸೂರು ಅರಮನೆಯಲ್ಲಿ ಯಾವಾಗ-ಯಾವ್ಯಾವ ಪೂಜೆ? ಇಲ್ಲಿದೆ‌ ಕಾರ್ಯಕ್ರಮಗಳ ಪಟ್ಟಿ

ನಾಡಹಬ್ಬ ಟೈಟಲ್​ ಪಡೆದರೆ 3 ಕೋಟಿ ರೂಪಾಯಿ, ಪ್ರಯೋಜಕತ್ವದ ವಿವಿಧ ವಿಭಾಗಗಳಾದ ಪ್ಲಾಟಿನಂಗೆ 1 ಕೋಟಿ ರೂ. ಗೋಲ್ಡ್​ಗೆ 50 ಲಕ್ಷ ರೂ. ಬೆಳ್ಳಿಗೆ 25 ಲಕ್ಷ ರೂ. ಅಸೋಸಿಯೇಟ್ ಮತ್ತು ಈವೆಂಟ್ ಸ್ಪಾನ್ಸರ್​ಗೆ 3 ಲಕ್ಷ ರೂ. ಫಿಕ್ಸ್ ಮಾಡಲಾಗಿದ್ದು, ಪ್ರಾಯೋಜಕತ್ವ ನೀಡುವವರಿಗೆ ದಸರಾ ಕಾರ್ಯಕ್ರಮಗಳಲ್ಲಿ ಅವರ ಕಂಪನಿಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶ ನೀಡಲಾಗಿದೆ.

ಪ್ರಾಯೋಜಕತ್ವ ನೀಡುವವರು ಇಂದು (ಅಕ್ಟೋಬರ್ 6 ಮಧ್ಯಾಹ್ನ 12ರೊಳಗೆ ಮಾಹಿತಿ ನೀಡಬೇಕೆಂದು ಎಂದು ಜಿಲ್ಲಾಧಿಕಾರಿಗಳು ಸಮಯ ನೀಡಿದ್ದಾರೆ. ಕಂಪನಿಗಳು, ಉದ್ಯಮಿಗಳು ಪ್ರಾಯೋಜಕತ್ವ ವಹಿಸಲು ಅವಕಾಶ ಇದೆ. ಪೂರ್ಣ ಕಾರ್ಯಕ್ರಮ, ಒಂದು ದಿನ ಅಥವಾ ಒಂದು ಕಾರ್ಯಕ್ರಮ ಹೀಗೆ ಯಾವ ರೀತಿಯಾದರೂ ಪ್ರಯೋಜಕತ್ವ ನೀಡಬಹುದಾಗಿದೆ ಎಂದು ಡಿಸಿ ವಿವರಿಸಿದ್ದಾರೆ.

ಕಳೆದ ವರ್ಷ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಒಟ್ಟು 26 ಕೋಟಿ ರೂ. ಖರ್ಚಾಗಿತ್ತು. ಈ ವರ್ಷವೂ 30 ಕೋಟಿ ರೂ. ವೆಚ್ಚದಲ್ಲಿ ದಸರಾ ಮಹೋತ್ಸ ವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ, ಬರ ಆವರಿಸಿದ್ದರಿಂದ ಸರಳವಾಗಿ ಆಚರಿಸಲು ತೀರ್ಮಾನಿಸಿದೆ.

ಮೈಸೂರು ದಸರಾ ಬಗ್ಗೆ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!