AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Balarama: 14 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ ಇದೀಗ ಸಾವನ್ನಪ್ಪಿದ್ದಾನೆ.

Elephant Balarama: 14 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ
ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಬಲರಾಮ ನಿಧನ
Rakesh Nayak Manchi
Rakesh Nayak Manchi|

Updated on:May 07, 2023 | 9:03 PM

Share

ಮೈಸೂರು: ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ (Balarama) ಬಾಯಕಲ್ಲಿ ಹುಣ್ಣಾಗಿತ್ತು. ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಇಂದು ಅಸ್ವಸ್ಥಗೊಂಡಿದ್ದನು. ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮೆರವಣಿಗೆಯ ಪ್ರಮುಖ ಆನೆಗಳಲ್ಲಿ ಬಲರಾಮನೂ ಒಬ್ಬನಾಗಿದ್ದ. ಬಲರಾಮನನ್ನು 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. ನಂತರ ಈತನನ್ನು ತರಬೇತಿ ಮೂಲಕ ಪಳಗಿಸಲಾಗಿತ್ತು. ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾದನು. ಆದರೆ ಅಂಬಾರಿ ಹೊರಲು ಬಲರಾಮ ಮೊದಲ ಆಯ್ಕೆಯಾಗಿರಲಿಲ್ಲ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದನು. ಹೀಗಾಗಿ ಬಲರಾಮನನ್ನು ಆಯ್ಕೆ ಮಾಡಲಾಯಿತು. ಅದರಂತೆ 1999 ಮತ್ತು 2011 ರ ನಡುವೆ ಒಟ್ಟು 14 ಬಾರಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಿದ್ದನು.

ಬಲರಾಮನನ್ನು ಬದಲಿಸುವ ಮುನ್ನವೇ ಆತ ತನ್ನ ತೂಕವನ್ನು ಕಳೆದುಕೊಂಡಿದ್ದನು. ಹೀಗಾಗಿ ಆತನಿಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಪರಿಣಾಮ ಬಲರಾಮನ ನಂತರ ಅಂಬಾರಿ ಹೊರಲು ಅರ್ಜುನ ಆಯ್ಕೆಯಾದನು. ಬಲರಾಮ ಪ್ರಮುಖ ಆನೆಯಾಗಿ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದನು.

ಬಲರಾಮನಿಗೆ ಮಾವುತನೇ ಎಲ್ಲ

ಮಾವುತನ ಸೂಚನೆಯನ್ನು ಚಾಚು ತಪ್ಪದೇ ಪಾಲಿಸುತ್ತಿದ್ದ ಬಲರಾಮನಿಗೆ ಮಾವುತನೇ ಎಲ್ಲವೂ ಆಗಿದ್ದನು. ಮಾವುತನನ್ನು ಹೊರತುಪಡಿಸಿ ಬೇರೆ ಯಾರೇ ಆಹಾರ ನೀಡಿದರೂ ಸೇವಿಸುತ್ತಿರಲಿಲ್ಲ. ತನ್ನ ಭವ್ಯವಾದ ನೋಟ ಮತ್ತು ಅವನ ಶಾಂತ ಸ್ವಭಾವದಿಂದಲೇ ಜನರ ಹೃದಯವನ್ನು ಗೆದ್ದಿದ್ದನು. ಈತ 2.7 ಮೀಟರ್ ಎತ್ತರ, ಸುಮಾರು 4590 ಕಿಲೋಗ್ರಾಂಗಳಷ್ಟು ಭಾರ ಇದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Sun, 7 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು