ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ

ಮೈಸೂರು ದಸರಾ 2025ರ ಗಜಪಡೆ, ಮಾವುತರು ಮತ್ತು ಸಿಬ್ಬಂದಿಗೆ ಒಟ್ಟು 2.04 ಕೋಟಿ ರೂ ವಿಮಾ ಸೌಲಭ್ಯ ಒದಗಿಸಲಾಗಿದೆ. ಆನೆಗಳಿಗೆ 68 ಲಕ್ಷ ರೂ, ಸಿಬ್ಬಂದಿಗೆ 86 ಲಕ್ಷ ರೂ ಮತ್ತು ಸಾರ್ವಜನಿಕ ಹಾನಿಗೆ 50 ಲಕ್ಷ ರೂ ವಿಮೆ ಒಳಗೊಂಡಿದೆ. ಈ ವಿಮಾ ಪಾಲಿಸಿಯು ಆಗಸ್ಟ್ 4 ರಿಂದ ಅಕ್ಟೋಬರ್ 5 ರವರೆಗೆ ಜಾರಿಯಿರಲಿದೆ.

ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ
ಗಜಪಡೆ
Updated By: ಗಂಗಾಧರ​ ಬ. ಸಾಬೋಜಿ

Updated on: Aug 06, 2025 | 8:53 AM

ಮೈಸೂರು, ಆಗಸ್ಟ್​ 06: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆ್ಯಂಡ್​ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.

2.04 ಕೋಟಿ ರೂ. ಮೊತ್ತದ ವಿಮೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ. ಇತ್ತ ಗಜಪಡೆ ಕೂಡ ಮೈಸೂರಿಗೆ ಬಂದಿದೆ. ಈ ಗಜಪಡೆ ಮೈಸೂರಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ವಿಮಾ ಸೌಲಭ್ಯದ ಮೊರೆ ಹೋಗಲಾಗಿದೆ. ಆಗಸ್ಟ್​ 4ರಿಂದ ಅಕ್ಟೋಬರ್​​ 5ರವರೆಗೆ ಈ ಸುರಕ್ಷತೆ ಚಾಲ್ತಿಯಲ್ಲಿರಲಿದೆ. ಟೆಂಡರ್‌ ಮೂಲಕ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ವಿಮೆ ಸೌಲಭ್ಯ ಮಾಡಿಸಲಾಗಿದೆ.

ಇದನ್ನೂ ಓದಿ: ಮೈಸೂರು ದಸರಾ: ಗಜಪಯಣಕ್ಕೆ ವಿಧ್ಯುಕ್ತ ಚಾಲನೆ, ಸಾಂಸ್ಕೃತಿಕ ನಗರಿ ತಲುಪಿದ ಆನೆಗಳ ಮೊದಲ ತಂಡ

ಇದನ್ನೂ ಓದಿ
ದಸರಾ: ಗಜಪಯಣಕ್ಕೆ ವಿಧ್ಯುಕ್ತ ಚಾಲನೆ, ಸಾಂಸ್ಕೃತಿಕ ನಗರಿ ತಲುಪಿದ ಆನೆಗಳ ತಂಡ
ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ
ಮೈಸೂರು ದಸರಾ ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ: ಇಲ್ಲಿದೆ ಪಟ್ಟಿ
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು

ದಸರಾ ಗಜಪಡೆಯ 14 ಆನೆಗಳ ಪೈಕಿ ಈ ಬಾರಿ 10 ಗಂಡಾನೆಗಳಿವೆ. ಈ ಗಂಡಾನೆಗಳಿಗೆ ತಲಾ 5 ಲಕ್ಷ ರೂ, 4 ಹೆಣ್ಣಾನೆಗಳಿಗೆ ತಲಾ 4.5 ಲಕ್ಷ ರೂ. 14 ಆನೆಗಳಿಗೆ ಒಟ್ಟು 68 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. 14 ಮಾವುತರು, 14 ಕಾವಾಡಿಗಳು, ಡಿಸಿಎಫ್, ಇಬ್ಬರು ಆರ್‌ಎಫ್‌ಓ, ಪಶುವೈದ್ಯಾಧಿಕಾರಿ, ಓರ್ವ ಸಹಾಯಕರು, 10 ಮಂದಿ ವಿಶೇಷ ಮಾವುತರು ಸೇರಿ ಒಟ್ಟು 43 ಮಂದಿಗೆ ತಲಾ 2 ಲಕ್ಷ ರೂ.ನಂತೆ 86 ಲಕ್ಷ ರೂ. ಮೊತ್ತದ ವಿಮೆ ಸೌಲಭ್ಯ ನೀಡಲಾಗಿದೆ.

ಮೈಸೂರಿನಲ್ಲಿ ದಸರಾ ಆನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಅಥವಾ ಸಾರ್ವಜನಿಕರಿಗೆ ತೊಂದರೆಯಾದರೆ ನಷ್ಟ ಭರಿಸಲು 50 ಲಕ್ಷ ರೂ. ಒಟ್ಟು 2.04 ಕೋಟಿ ರೂ. ಮೊತ್ತದ ವಿಮೆ ಮಾಡಿಸಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ 67 ಸಾವಿರ ರೂ ಪ್ರಿಮಿಯಂ ಮೊತ್ತ ಪಾವತಿ ಮಾಡಲಾಗುವುದು.

ಇದನ್ನೂ ಓದಿ: ಮೈಸೂರು: ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ

ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ತಂಡ ಮೈಸೂರಿಗೆ ಬರ್ತಿದ್ದಂತೆಯೇ, ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಆನೆಗಳು ಆರೋಗ್ಯವಾಗಿವೆ. ಆಗಸ್ಟ್​ 10ರಂದು ದಸರಾ ಗಜಪಡೆ ಮೈಸೂರು ಅರಮನೆಗೆ ಎಂಟ್ರಿ ಕೊಡಲಿವೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನ ಅರಮನೆಗೆ ಸ್ವಾಗತಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.