ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!

ಕಳೆದ ವರ್ಷ ಮೈಸೂರು ದಸರಾ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣದ ಅಪರಾಧಿ ಕಾರ್ತಿಕ್​ಗೆ (32) ಮೈಸೂರಿನ ತ್ವರಿತಗತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನಜರಬಾದ್ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದರು.

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!
ಅಪರಾಧಿ ಕಾರ್ತಿಕ್
Edited By:

Updated on: Oct 17, 2026 | 1:40 PM

ಮುಖ್ಯಾಂಶಗಳು

  • ಮೈಸೂರಿನ ಬಲೂನ್ ಮಾರುವ ಬಾಲಕಿ ಕೊಲೆ ಪ್ರಕರಣದ ಅಪರಾಧಿಗೆ ಗಲ್ಲುಶಿಕ್ಷೆ.
  • ದಸರಾ ವೇಳೆ 9 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ.
  • ಮೈಸೂರು ತ್ವರಿತಗತಿ ನ್ಯಾಯಾಲಯದಿಂದ ಅಪರಾಧಿ ಕಾರ್ತಿಕ್‌ಗೆ ಮರಣದಂಡನೆ ಶಿಕ್ಷೆ ಪ್ರಕಟ.

ಮೈಸೂರು, ಅಕ್ಟೋಬರ್ 17: ದಸರಾ ಮಹೋತ್ಸವದ ವೇಳೆ ಇಡೀ ರಾಜ್ಯವನ್ನೇ ನಡುಗಿಸಿದ್ದ 9 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕೃತ್ಯ ಎಸಗಿದ ಅಪರಾಧಿ ಕಾರ್ತಿಕ್ (32) ಎಂಬಾತನಿಗೆ ಗಲ್ಲು ಶಿಕ್ಷೆ (ಮರಣದಂಡನೆ) ವಿಧಿಸಿ ಮೈಸೂರಿನ ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪಿ. ವಘಾಢೆಯವರಿದ್ದ ಪೀಠ ತೀರ್ಪು ಪ್ರಕಟಿಸಿದೆ.

ನಡೆದಿದ್ದೇನು?

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಮಯದಲ್ಲಿ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಕುಟುಂಬವೊಂದು ಮೈಸೂರಿಗೆ ಬಂದಿತ್ತು. ಈ ಕುಟುಂಬದ 9 ವರ್ಷದ ಪುಟ್ಟ ಬಾಲಕಿ ದಸರಾ ವಸ್ತುಪ್ರದರ್ಶನದ ಆವರಣದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದಳು. ರಾತ್ರಿ ವೇಳೆ ಬಾಲಕಿ ತನ್ನ ಕುಟುಂಬದೊಂದಿಗೆ ಟೆಂಟ್‌ನಲ್ಲಿ ನಿದ್ರಿಸುತ್ತಿದ್ದಾಗ, ಅಪರಾಧಿ ಕಾರ್ತಿಕ್ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿದ್ದ. ಬಳಿಕ ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿ ಮೃತದೇಹವನ್ನು ಬಿಟ್ಟು ನಾಪತ್ತೆಯಾಗಿದ್ದ.

24 ಗಂಟೆಯಲ್ಲೇ ಆರೋಪಿ ಬಂಧನ

ಈ ಘಟನೆ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಘಟನೆ ನಡೆದ ಕೇವಲ 24 ಗಂಟೆಗಳ ಒಳಗಾಗಿ ಆರೋಪಿ ಕಾರ್ತಿಕ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

YouTube video player

ಇದನ್ನೂ ಓದಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಕೃತ್ಯ ಸಾಬೀತು: ದಸರಾ ವೇಳೆಯೇ ಕಾಮುಕನಿಗೆ ಶಿಕ್ಷೆ ಪ್ರಕಟ

ಕೋರ್ಟ್ ತೀರ್ಪು

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮೈಸೂರಿನ FTSC-1 ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪಿ. ವಘಾಢೆ ಅವರು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜಯಂತಿ ಅವರು ಪ್ರಬಲ ವಾದ ಮಂಡಿಸಿದ್ದರು. ಈ ತೀರ್ಪು ಬಡ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಟ್ಟಂತಾಗಿದ್ದು, ಇಂತಹ ಕಾಮುಕರಿಗೆ ಸೂಕ್ತ ಎಚ್ಚರಿಕೆಯಾಗಿದೆ ಎಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Sat, 17 October 26

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us