AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಪ್ರದಾಯಿಕವಾಗಿ ಮೈಸೂರು ದಸರಾ ಆಚರಣೆಗೆ ತೀರ್ಮಾನ, ದುಂದುವೆಚ್ಚಕ್ಕೆ ಬ್ರೇಕ್: ಹೆಚ್‌.ಸಿ.ಮಹದೇವಪ್ಪ

ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವ ಕಾರಣ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2023 ಅದನ್ನು ಈ ಬಾರಿ ಅದ್ದೂರಿಯಾಗಿ ನಡೆಸದೆ ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಆ ಮೂಲಕ ದುಂದುವೆಚ್ಚಕ್ಕೆ ಬ್ರೇಕ್ ಹಾಕಲಾಗಿದೆ. ಬರ ಸಂದರ್ಭದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ಸೂಕ್ತ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಹೇಳಿದ್ದಾರೆ.

ಸಾಂಪ್ರದಾಯಿಕವಾಗಿ ಮೈಸೂರು ದಸರಾ ಆಚರಣೆಗೆ ತೀರ್ಮಾನ, ದುಂದುವೆಚ್ಚಕ್ಕೆ ಬ್ರೇಕ್: ಹೆಚ್‌.ಸಿ.ಮಹದೇವಪ್ಪ
ಮೈಸೂರು ದಸರಾ
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Sep 23, 2023 | 9:47 PM

ಮೈಸೂರು, ಸೆ.23: ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವ ಕಾರಣ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವ-2023 ಅದನ್ನು ಈ ಬಾರಿ ಅದ್ದೂರಿಯಾಗಿ ನಡೆಸದೆ ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಆ ಮೂಲಕ ದುಂದುವೆಚ್ಚಕ್ಕೆ ಬ್ರೇಕ್ ಹಾಕಲಾಗಿದೆ. ಬರ ಸಂದರ್ಭದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ಸೂಕ್ತ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ 196 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಿಗೆ ಮತ್ತಷ್ಟು ತಾಲೂಕು ಸೇರ್ಪಡೆ ಆಗಲಿವೆ. ಬರ ಸಂದರ್ಭದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ಸೂಕ್ತ ಅಲ್ಲ ಎಂದರು.

ಇದನ್ನೂ ಓದಿ: ಮೈಸೂರು ದಸರಾ ಆಚರಣೆಗೆ ಆವಾಗ ಕೊರೊನಾ, ಈವಾಗ ‘ಬರ’ಸಿಡಿಲು -ಈ ಕುರಿತಾದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ

ಅದ್ಧೂರಿ ದಸರಾಗೆ ಸಿಎಂ ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ ನೀಡಿದ್ದರು. ಆದರೆ ಸರಳವೂ ಅಲ್ಲ, ಅದ್ಧೂರಿಯೂ ಅಲ್ಲ, ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಾಂಪ್ರದಾಯಿಕ ದಸರಾ ಹಿನ್ನೆಲೆಯೇ ಬೇರೆ, ಈಗ ಆಗುತ್ತಿರುವುದೇ ಬೇರೆ ಎಂದರು.

ಕಲೆ ಕ್ರೀಡೆ ಸಾಹಿತ್ಯ ಇತರ ಚರಿತ್ರೆ ಕಡಿಮೆಯಾಗುತ್ತಿದೆ. ಇದಕ್ಕೆ ಜೀವ ನೀಡುವ ಕೆಲಸ ಮಾಡಬಹುದು. ಎಲ್ಲಾ‌ ಕಾರ್ಯಕ್ರಮಗಳು ಇರಲಿವೆ, ಆದರೆ ದುಂದುವೆಚ್ಚಕ್ಕೆ ಬ್ರೇಕ್ ಹಾಕಲಾಗಿದೆ. ಪ್ರಸಕ್ತ ವರ್ಷ ಪ್ರಾಯೋಜಕತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು. ದಸರಾ ದೀಪಾಲಂಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!