ಮೈಸೂರು, ಸೆ.23: ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವ ಕಾರಣ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವ-2023 ಅದನ್ನು ಈ ಬಾರಿ ಅದ್ದೂರಿಯಾಗಿ ನಡೆಸದೆ ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಆ ಮೂಲಕ ದುಂದುವೆಚ್ಚಕ್ಕೆ ಬ್ರೇಕ್ ಹಾಕಲಾಗಿದೆ. ಬರ ಸಂದರ್ಭದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ಸೂಕ್ತ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ಸಿ ಮಹಾದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ 196 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಿಗೆ ಮತ್ತಷ್ಟು ತಾಲೂಕು ಸೇರ್ಪಡೆ ಆಗಲಿವೆ. ಬರ ಸಂದರ್ಭದಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ಸೂಕ್ತ ಅಲ್ಲ ಎಂದರು.
ಇದನ್ನೂ ಓದಿ: ಮೈಸೂರು ದಸರಾ ಆಚರಣೆಗೆ ಆವಾಗ ಕೊರೊನಾ, ಈವಾಗ ‘ಬರ’ಸಿಡಿಲು -ಈ ಕುರಿತಾದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ
ಅದ್ಧೂರಿ ದಸರಾಗೆ ಸಿಎಂ ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ ನೀಡಿದ್ದರು. ಆದರೆ ಸರಳವೂ ಅಲ್ಲ, ಅದ್ಧೂರಿಯೂ ಅಲ್ಲ, ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಾಂಪ್ರದಾಯಿಕ ದಸರಾ ಹಿನ್ನೆಲೆಯೇ ಬೇರೆ, ಈಗ ಆಗುತ್ತಿರುವುದೇ ಬೇರೆ ಎಂದರು.
ಕಲೆ ಕ್ರೀಡೆ ಸಾಹಿತ್ಯ ಇತರ ಚರಿತ್ರೆ ಕಡಿಮೆಯಾಗುತ್ತಿದೆ. ಇದಕ್ಕೆ ಜೀವ ನೀಡುವ ಕೆಲಸ ಮಾಡಬಹುದು. ಎಲ್ಲಾ ಕಾರ್ಯಕ್ರಮಗಳು ಇರಲಿವೆ, ಆದರೆ ದುಂದುವೆಚ್ಚಕ್ಕೆ ಬ್ರೇಕ್ ಹಾಕಲಾಗಿದೆ. ಪ್ರಸಕ್ತ ವರ್ಷ ಪ್ರಾಯೋಜಕತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು. ದಸರಾ ದೀಪಾಲಂಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ