ಆಷಾಢ: ಎಚ್ಚೆತ್ತ ಮೈಸೂರು ಜಿಲ್ಲಾಡಳಿತ, ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಬ್ರೇಕ್
ಮೈಸೂರು:ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡ್ತಿದೆ. ಆದ್ರೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಈ ನಡುವೆ ದೇವಸ್ಥಾನಗಳನ್ನ ಸಾರ್ವಜನಿಕರ ದರ್ಶನಕ್ಕೆ ತೆರೆದಿರೋದು ಹೊಸ ಸಮಸ್ಯೆಗೆ ಆಹ್ವಾನ ನೀಡುವ ಲಕ್ಷಣಗಳು ಕಾಣುತ್ತಿವೆ. ಹೌದು, ಆಷಾಢ ಮಾಸದ ಹೆಸರಿನಲ್ಲಿ ದೇವಾಲಯಗಳಿಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಮೈಸೂರಿನ ಚಾಮುಂಡೇಶ್ವರಿ ದೇಗುಲ ಸೇರಿದಂತೆ ಹಲವಾರು ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುವ ಸಾಧ್ಯತೆ ಹೆಚ್ಚಾಗ್ತಿದೆ. ಇದನ್ನು ಗಮನಿಸಿರುವ ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. […]

ಮೈಸೂರು:ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡ್ತಿದೆ. ಆದ್ರೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಈ ನಡುವೆ ದೇವಸ್ಥಾನಗಳನ್ನ ಸಾರ್ವಜನಿಕರ ದರ್ಶನಕ್ಕೆ ತೆರೆದಿರೋದು ಹೊಸ ಸಮಸ್ಯೆಗೆ ಆಹ್ವಾನ ನೀಡುವ ಲಕ್ಷಣಗಳು ಕಾಣುತ್ತಿವೆ.
ಹೌದು, ಆಷಾಢ ಮಾಸದ ಹೆಸರಿನಲ್ಲಿ ದೇವಾಲಯಗಳಿಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಮೈಸೂರಿನ ಚಾಮುಂಡೇಶ್ವರಿ ದೇಗುಲ ಸೇರಿದಂತೆ ಹಲವಾರು ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುವ ಸಾಧ್ಯತೆ ಹೆಚ್ಚಾಗ್ತಿದೆ. ಇದನ್ನು ಗಮನಿಸಿರುವ ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.
ಆಷಾಢದ ನೆಪದಲ್ಲಿ ಪ್ರಸಾದ್ ವಿತರಣೆ ಇಲ್ಲ ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಆಷಾಢದ ನೆಪ ಹೇಳಿ ಮೈಸೂರು ಜಿಲ್ಲೆಯಲ್ಲಿರುವ ಯಾವುದೇ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆ ಮಾಡುವಂತಿಲ್ಲ ಎಂದಿದ್ದಾರೆ. ಇಷ್ಟೇ ಅಲ್ಲ, ಮೈಸೂರಿನ ಪ್ರಖ್ಯಾತ ಚಾಮುಂಡಿ ಬೆಟ್ಟವನ್ನ ಮುಚ್ಚುವ ಕುರಿತು ಚಿಂತನೆಯನ್ನ ಜಿಲ್ಲಾಡಳಿತ ನಡೆಸಿದೆ. ಈ ಸಂಬಂಧ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯನ್ನ ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ.



