AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಗಿರಿ ಗಲಭೆ: ಸತೀಶ್ ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಹಿನ್ನಡೆ!

ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್​ನಿಂದ ಶುರುವಾದ ಮೈಸೂರು ಉದಯಗಿರಿ ಗಲಾಟೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಅಲ್ಲದೇ ಪರ ವಿರೋಧದ ಆರೋಪಗಳು ಸಹ ತಾರಕ್ಕೇರಿದ್ದು, ಇದರ ಮಧ್ಯೆ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್​ನನ್ನು ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಮೈಸೂರು ಪೊಲೀಸರಿಗೆ ಹಿನ್ನಡೆಯಾಗಿದೆ.

ಉದಯಗಿರಿ ಗಲಭೆ: ಸತೀಶ್ ಗಡಿಪಾರಿಗೆ ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಹಿನ್ನಡೆ!
Udayagiri Police Station (1)
ರಾಮ್​, ಮೈಸೂರು
| Edited By: |

Updated on:Feb 25, 2025 | 9:01 PM

Share

ಮೈಸೂರು, (ಫೆಬ್ರವರಿ 25): ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್​ ಗಡಿಪಾರು ಪ್ರಕ್ರಿಯೆಗೆ ಕೋರ್ಟ್​ ತಡೆ ನೀಡಿದೆ. ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್​​ ಮಾಡಿ ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಕಾರಣನಾದ ಆರೋಪಿ ಸತೀಶ್​ ಗಡಿಪಾರಿಗೆ ಪೊಲೀಸರು ಸಿದ್ಧತೆ ನಡೆಸಿದ್ದರು. ಆದ್ರೆ, ಪೊಲೀಸರ ಕ್ರಮ ಪ್ರಶ್ನಿಸಿ ಸತೀಶ್ ಪರ ವಕೀಲ ಮೈಸೂರು ಜಿಲ್ಲಾ ಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್​ ಸತೀಶ್ ಅರ್ಜಿಯನ್ನು ಪುರಸ್ಕರಿಸಿದ್ದು, ಆರೋಪಿ ಸತೀಶ್​ನನ್ನು ಗಡಿಪಾರು ಮಾಡದಂತೆ ಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಮೈಸೂರು ಪೊಲೀಸರಿಗೆ ಹಿನ್ನಡೆಯಾದಂತಾಗಿದೆ.

ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಮಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್​​ ಗಡಿಪಾರಿಗೆ ಮೈಸೂರು ನಗರ ಪೊಲೀಸರು ಮುಂದಾಗಿದ್ದು, ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈ ಬಗ್ಗೆ ಸತೀಶ್ ಪರ ವಕೀಲ ಭಾಸ್ಕರ್​ ಅವರು ನಗರ ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ವಿಚಾರಣೆಗೆ ಭಾಗಿಯಾಗಿ ಆಕ್ಷೇಪಣೆ ಸಲ್ಲಿಸಿದ್ದರು. ಅದಾದ ಬಳಿಕ ಪೊಲೀಸರ ನಿರ್ಧಾರ ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: ಮೈಸೂರು: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ದೆಹಲಿ ವಿಧಾನಸಭೆ ಫಲಿತಾಂಶ ಪ್ರಕಟವಾದ ಬಳಿಕ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿದ ಪೋಸ್ಟ್​ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್. ಈತನ ಪೋಸ್ಟ್​ನಿಂದಾಗಿ ಕೆರಳಿದ ಮುಸ್ಲಿಂ ಸಮುದಾಯ ಸತೀಶ್​ನನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಭಟನೆಗಿಳಿತು. ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಮುಸ್ಲಿಂ ಸಮುದಾಯದ ನೂರಾರು ಜನರು ಸೇರಿಕೊಂಡು ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಪೊಲೀಸರು ಹಾಗೂ ಅವರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಬಳಿಕ ಪೊಲೀಸರು ಆರೋಪಿ ಸತೀಶ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದ್ರೆ, ಸತೀಶ್​ಗೆ ಮೈಸೂರು 2ನೇ ಹೆಚ್ಚುವರಿ ಜಿಲ್ಲಾ ಸಿವಿಲ್​ ನ್ಯಾಯಾಲಯವು ಜಾಮೀನು ನೀಡಿತ್ತು.

Published On - 8:55 pm, Tue, 25 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್