AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆಪರೇಷನ್ ವೇಳೆ ದಂಗಾದ ವೈದ್ಯರು, ಮಹಿಳೆ ದೇಹದಲ್ಲಿ 861 ಕಲ್ಲುಗಳು ಪತ್ತೆ

ಮೈಸೂರಿನಲ್ಲಿ 55 ವರ್ಷದ ಮಹಿಳೆಯೊಬ್ಬರ ಪಿತ್ತಕೋಶದಲ್ಲಿ ಕಂಡುಬಂದ 861 ಕಲ್ಲುಗಳನ್ನು ಡಾ. ನಿಖಿಲ್ ಕುಮಾರ್ ಮತ್ತು ಡಾ. ಆರ್.ಎಂ. ಅರವಿಂದ್ ನೇತೃತ್ವದ ವೈದ್ಯಕೀಯ ತಂಡ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ತೀವ್ರ ಹೊಟ್ಟೆ ನೋವು ಮತ್ತು ಜಾಂಡೀಸ್‌ನಿಂದ ಬಳಲುತ್ತಿದ್ದ ಮಹಿಳೆಗೆ ERCP ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಕಲ್ಲುಗಳನ್ನು ತೆಗೆಯಲಾಗಿದೆ.

ಮೈಸೂರು: ಆಪರೇಷನ್ ವೇಳೆ ದಂಗಾದ ವೈದ್ಯರು, ಮಹಿಳೆ ದೇಹದಲ್ಲಿ 861 ಕಲ್ಲುಗಳು ಪತ್ತೆ
ಮಹಿಳಾ ದೇಹದಲ್ಲಿದ ಕಲ್ಲು
ರಾಮ್​, ಮೈಸೂರು
| Edited By: |

Updated on: Jun 08, 2025 | 11:16 AM

Share

ಮೈಸೂರು, ಜೂನ್​ 08: ಮಹಿಳೆಯ ದೇಹದಿಂದ 861 ಕಲ್ಲುಗಳನ್ನು (stones) ವೈದ್ಯರು ಹೊರ ತೆಗೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಮೈಸೂರಿನ ಕಾವೇರಿ ಆಸ್ಪತ್ರೆಯ ವೈದ್ಯರಿಂದ ನಡೆದ ಅಪರೂಪದ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಿದೆ. ವೈದ್ಯರ ತಪಾಸಣೆ ವೇಳೆ ಮಹಿಳೆಯ ಗಾಲ್ ಬ್ಲಾಡರ್ ಮತ್ತು ಬೈಲ್ ಡಕ್ಟ್​ನಲ್ಲಿ ಕಲ್ಲುಗಳು ಇರುವುದು ಪತ್ತೆ ಆಗಿದೆ. ಕೂಡಲೇ ಎಂಡೋಸ್ಕೋಪಿಕ್ ರೆಟ್ರೋಗ್ರೇಡ್​​ಕೊಲೆಂಜಿಯೊಪ್ಯಾಂಕ್ರಿಯಾಟೋಗ್ರಫಿ (ERCP) ವಿಧಾನದ ಮ‌ೂಲಕ ಶಸ್ತ್ರಚಿಕಿತ್ಸೆ ಮಾಡಿ ಕಲ್ಲುಗಳನ್ನು ಹೊರ ತೆಗೆದಿದ್ದಾರೆ.

55 ವರ್ಷದ ಮಹಿಳೆಯೋರ್ವರು ಹೊಟ್ಟೆನೋವು ಮತ್ತು ಜಾಂಡೀಸ್​ನಿಂದ ಬಳಲುತ್ತಿದ್ದರು. ಹೀಗಾಗಿ ತಪಾಸಣೆ ಮಾಡಿದ ವೈದ್ಯರು, ಗಾಲ್ ಬ್ಲಾಡರ್ ಮತ್ತು ಬೈಲ್ ಡಕ್ಟ್​ನಲ್ಲಿದ್ದ ಕಲ್ಲುಗಳ ರಾಶಿಯನ್ನು ಕಂಡು ವೈದ್ಯರೇ ಶಾಕ್​ ಆಗಿದ್ದಾರೆ.

ಇದನ್ನೂ ಓದಿ: ರಜೆ ದಿನ ಸಮಾಜ ಸೇವೆಗೆ ಮೀಸಲಿಟ್ಟ ವಿದ್ಯಾರ್ಥಿಗಳು: ಸ್ವಂತ ಹಣದಲ್ಲಿ ರಸ್ತೆ ದುರಸ್ಥಿ, ರಾಜಕಾರಣಿಗಳಿಗೆ ಮಾದರಿ

ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ನಿಖಿಲ್ ಕುಮಾರ್ ಜೋಗೆ ಹಾಗೂ ಲ್ಯಾಪರೊಸ್ಕೋಪಿಕ್ ಸೀನಿಯರ್ ಸರ್ಜನ್ ಡಾ. ಆರ್​ಎಂ ಅರವಿಂದ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು,​ 861 ಕಲ್ಲುಗಳನ್ನನು ಹೊರ ತೆಗೆಯಲಾಗಿದೆ. ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಸಾವಿರಾರು ಸಸಿ ನೆಟ್ಟ ಸ್ನೇಹಿತರು

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಾರಥಿ ಗ್ರಾಮದ ಸ್ನೇಹ ಬಳಗದಿಂದ ಗ್ರಾಮದ ಪಕ್ಕದ ಗುಡ್ಡದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಯಿತು. ಸಾರಥಿ ಗ್ರಾಮದ ಸರ್ಕಾರಿ ಶಾಲೆಯ ಹಳೇ ವಿದ್ಯಾರ್ಥಿಗಳು ಹಾಗೂ ಹಾಲಿ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.

ಇದನ್ನೂ ಓದಿ: Bengaluru stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಮಹತ್ವದ ತೀರ್ಮಾನ ಕೈಗೊಂಡ ಬಿಸಿಸಿಐ

ಈ ಹಿಂದೆ ಕೂಡ ಗ್ರಾಮದ ಸುತ್ತಮುತ್ತಲು ಸಸಿ ನೆಟ್ಟಿದ್ದರು. ಇದೀಗ ಗ್ರಾಮದ ಪಕ್ಕದ ಗುಡ್ಡದಲ್ಲಿ ನೀರಿನ ವ್ಯವಸ್ಥೆ ಮಾಡಿ ಸಾವಿರಾರು ಸಸಿ‌ಗಳನ್ನು ನೆಡುವ ಮೂಲಕ ಸಾರಥಿ ಗ್ರಾಮದ ಸ್ನೇಹ ಬಳಗ ಇತರರಿಗೆ ಮಾದರಿ ಆಗಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.