Stop Rape: ಮೈಸೂರಿನ ಖಾಸಗಿ ಫಾರ್ಮ್​ಹೌಸ್​ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

TV9 Digital Desk

| Edited By: guruganesh bhat

Updated on:Sep 17, 2021 | 11:13 PM

ಅತ್ಯಾಚಾರದ ಆರೋಪಿ ಬಿಹಾರ ಮೂಲದ ನಜೀಮ್​ನನ್ನು ಬಂಧಿಸಲಾಗಿದೆ.

Stop Rape: ಮೈಸೂರಿನ ಖಾಸಗಿ ಫಾರ್ಮ್​ಹೌಸ್​ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
ಪ್ರಾತಿನಿಧಿಕ ಚಿತ್ರ

Follow us on

ಮೈಸೂರು: ವ್ಯಕ್ತಿಯೋರ್ವರ ಖಾಸಗಿ ಫಾರ್ಮ್​ನ ಕೆಲಸಕ್ಕಿದ್ದ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಮೈಸೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಟಿ.ನರಸೀಪುರ ಠಾಣಾ ವ್ಯಾಪ್ತಿಯ ಫಾರ್ಮ್‌ಹೌಸ್‌ನಲ್ಲಿ ಘಟನೆ ನಡೆದಿದ್ದು ಅತ್ಯಾಚಾರದ ಆರೋಪಿ ಬಿಹಾರ ಮೂಲದ ನಜೀಮ್​ನನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಎಂದು ಅಪ್ರಾಪ್ತ ಬಾಲಕಿಯ ತಾಯಿ ನೀಡಿದ್ದ ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಸೆಪ್ಟೆಂಬರ್ 13ರಂದೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಂಧಿತ ಆರೋಪಿ ಫಾರ್ಮ್‌ಹೌಸ್‌ನಲ್ಲಿ ಸಾಕುಪ್ರಾಣಿಗಳನ್ನು ನೋಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ.

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ; ಮೃತದೇಹಗಳೊಟ್ಟಿಗೆ 5 ದಿನ ಕಳೆದ 3 ವರ್ಷದ ಮಗು ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿವೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು.  ಜತೆಗೆ  ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.  ಈಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೌಟುಂಬಿಕ ಕಲಹದಿಂದ ಕುಟುಂಬದ  ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ.  ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  

ಮೈಸೂರು ಗ್ಯಾಂಗ್​ ರೇಪ್​​: ಪ್ರಕರಣದ ಗಂಭೀರತೆ ಮನದಟ್ಟು ಪಡಿಸಲು ಮೈಸೂರು ಪೊಲೀಸರು ಮುಂಬೈಗೆ ತೆರಳುವ ಸಾಧ್ಯತೆ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(Mysuru Farmhouse minor girl rape accused arrested by Police)

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada