Mysuru: ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ

ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಕೊಂಡು ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ ಆಗಿರುವ ಘಟನೆ ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.

Mysuru: ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ
ಆಕಾಶದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ದಟ್ಟ ಹೊಗೆ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 19, 2023 | 3:48 PM

ಮೈಸೂರು: ಪಟಾಕಿ ಮಳಿಗೆ (firecracker shop) ಯಲ್ಲಿ ಆಕಸ್ಮಿಕ ಬೆಂಕಿ ಕಾಣಿಕೊಂಡು ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ ಆಗಿರುವ ಘಟನೆ ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಆಕಾಶಕ್ಕೆ ಚಿಮ್ಮಿ ಪಟಾಕಿಗಳು ಸಿಡಿಯುತ್ತಿದ್ದು, ಆಕಾಶದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ದಟ್ಟ ಹೊಗೆ ಆವರಿಸಿದೆ. ಪಟಾಕಿ ಮಳಿಗೆಯಲ್ಲಿ ಜನರು ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಕ್ಕ ಪಕ್ಕದ ಮಳಿಗೆಗಳಿಗೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಹೆಬ್ಬಾಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಫರ್ನೀಚರ್ ಅಂಗಡಿ

ಆನೇಕಲ್: ಫರ್ನೀಚರ್ ಅಂಗಡಿದೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಫರ್ನೀಚರ್ ವಸ್ತುಗಳ ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ದೊಮ್ಮಸಂದ್ರ ಮುಖ್ಯ ರಸ್ತೆಯಲ್ಲಿ ಮಾ.9 ರಂದು ನಡೆದಿತ್ತು. ಶಾಟ್ ಸೆರ್ಕ್ಯುಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ರಘು ರೆಡ್ಡಿ ಎಂಬುವವರಿಗೆ ಸೇರಿದ ಜಾಗದಲ್ಲಿ ಫರ್ನೀಚರ್ ವ್ಯವಹಾರಕ್ಕೆ ಅಂಗಡಿ ಬಾಡಿಗೆಗೆ ನೀಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಈ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭಿವಿಸಿದ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 45 ಲಕ್ಷದಷ್ಟು ಬೆಲೆ ಬಾಳುವ ಫರ್ನೀಚರ್ ಸಾಮಾನು ಸುಟ್ಟು ಭಸ್ಮವಾಗಿದೆ ಎನ್ನಲಾಗಿತ್ತು.

ಬೆಂಕಿ ಅನಾಹುತದಿಂದ ಅಕ್ಕಪಕ್ಕದ ಅಂಗಡಿಗಳ ಮಾಲಿಕರಿಗೂ ಆತಂಕ ವ್ಯಕ್ತವಾಗಿತ್ತು. ಕೆಲ ಗಂಟೆಗಳ ಕಾಲ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. ಹಾಗೇ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಫುಲ್‌ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೈಕೊಂಡರಹಳ್ಳಿ, ದೊಮ್ಮಸಂದ್ರ, ಬಡವಾಣೆ ಪವರ್ ಕಟ್​ ಮಾಡಲಾಗಿತ್ತು.

ಗೋಧಿ ಜಮೀನಿಗೆ ಬೆಂಕಿ, 1.50 ಲಕ್ಷ ರೂ. ಮೌಲ್ಯದ ಗೋಧಿ ಭಸ್ಮ

ಗದಗ: ಗೋಧಿ ಜಮೀನಿಗೆ ಬೆಂಕಿ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ 3 ಎಕರೆ ಗೋಧಿ ಭಸ್ಮವಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ರೈತ ವೆಂಕನಗೌಡ್ರ, ಗದ್ದಿಗೌಡ್ರ ಎಂಬುವರಿಗೆ ಸೇರಿದ 3 ಎಕರೆ ಜಮೀನಿಗೆ ವಿದ್ಯುತ್ ಶಾಟ್ ಸರ್ಕಿಟ್​​ನಿಂದ ಬೆಂಕಿ ತಗುಲಿರುವ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಚಾರ್ಮಾಡಿಘಾಟ್​ನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಅಪಾರ ಪ್ರಮಾಣದ ವನ್ಯಸಂಪತ್ತು ಬೆಂಕಿಗಾಹುತಿ

ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರಯೋಜನವಾಗಲಿಲ್ಲ. ಇದರಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ 40 ಕ್ವಿಂಟಾಲ್ ನಷ್ಟು ಗೋಧಿ ಸುಟ್ಟು ಹೋಗಿತ್ತು. ರೈತ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದರು. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓಲದ ಇಲ್ಲಿ ಕ್ಲಿಕ್ ಮಾಡಿ. 

Published On - 2:47 pm, Wed, 19 April 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್