Mysore: ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಎಟಿಎಂ ಮಷಿನ್
ಕೆ.ಆರ್.ನಗರದ ಬಸ್ ನಿಲ್ದಾಣದಲ್ಲಿ ಕರ್ಣಾಟಕ ಬ್ಯಾಂಕ್ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿರುವಂತಹ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿ ತಗುಲಿ ಎಟಿಎಂ ಮಷಿನ್ ಹೊತ್ತಿ ಉರಿದಿದೆ.

ಮೈಸೂರು: ಕೆ.ಆರ್.ನಗರದ ಬಸ್ ನಿಲ್ದಾಣದಲ್ಲಿ ಕರ್ಣಾಟಕ ಬ್ಯಾಂಕ್ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಅಗ್ನಿ (fire) ಅವಘಡ ಸಂಭವಿಸಿರುವಂತಹ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿ ತಗುಲಿ ಎಟಿಎಂ ಮಷಿನ್ ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇತ್ತೀಚೆಗೆ ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು ಬಳಿ ಇತ್ತೀಚೆಗೆ ನಡೆದಿತ್ತು. ಎಸ್ಆರ್ಎಸ್ ಟ್ರಾವೆಲ್ಸ್ಗೆ ಸೇರಿದ 3 ಬಸ್ಗಳು ಹೊತ್ತಿ ಉರಿದಿದ್ದವು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪಾರು
ಆನೇಕಲ್: ಇತ್ತೀಚೆಗೆ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ಆನೇಕಲ್ ತಾಲೂಕಿನ ಬಸವನಪುರ ಗೇಟ್ನಲ್ಲಿ ನಡೆದಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಳಗಿಳಿದು ಪ್ರಯಾಣಿಕರು ಪಾರಾಗಿದ್ದರು. ತಾಂತ್ರಿಕದೋಷದಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನ ವ್ಯಕ್ತವಾಗಿತ್ತು. ಕೆಎ 57, ಎಫ್ 0569 ಸಂಖ್ಯೆ ಬಿಎಂಟಿಸಿ ಬಸ್ ಬೆಂಕಿಗಾಹುತಿ ಆಗಿದ್ದು, ಮೆಜೆಸ್ಟಿಕ್-ಜಿಗಣಿ ನಡುವೆ ಸಂಚರಿಸುತ್ತಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದರು.
ಇದನ್ನೂ ಓದಿ: Mysuru: ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಬಸ್
ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿತ್ತು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಇತ್ತೀಚೆಗೆ ಘಟನೆ ನಡೆದಿತ್ತು. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿತ್ತು.
ಇದನ್ನೂ ಓದಿ: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಫರ್ನೀಚರ್ ಅಂಗಡಿ
ಆನೇಕಲ್: ಫರ್ನೀಚರ್ ಅಂಗಡಿದೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಫರ್ನೀಚರ್ ವಸ್ತುಗಳ ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ದೊಮ್ಮಸಂದ್ರ ಮುಖ್ಯ ರಸ್ತೆಯಲ್ಲಿ ಮಾ.9 ರಂದು ನಡೆದಿತ್ತು. ಶಾಟ್ ಸೆರ್ಕ್ಯುಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ರಘು ರೆಡ್ಡಿ ಎಂಬುವವರಿಗೆ ಸೇರಿದ ಜಾಗದಲ್ಲಿ ಫರ್ನೀಚರ್ ವ್ಯವಹಾರಕ್ಕೆ ಅಂಗಡಿ ಬಾಡಿಗೆಗೆ ನೀಡಲಾಗಿತ್ತು.
ಈ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭಿವಿಸಿದ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 45 ಲಕ್ಷದಷ್ಟು ಬೆಲೆ ಬಾಳುವ ಫರ್ನೀಚರ್ ಸಾಮಾನು ಸುಟ್ಟು ಭಸ್ಮವಾಗಿದೆ ಎನ್ನಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:47 pm, Fri, 28 April 23