AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

ಸದ್ಯದ ದಿನಮಾನಗಳಲ್ಲಿ ಯಾರನ್ನ ನಂಬುವುದು, ಯಾರನ್ನ ನಂಬಾರದು ಎಂಬುವುದು ದೊಡ್ಡ ಪ್ರಶ್ನೆ. ಏಕೆಂದರೆ ಜೊತೆಗೆ ಇದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ಹೆಚ್ಚಾಗಿದ್ದಾರೆ. ಇದಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ. ಹಣದಾಸೆಗೆ ಅಪಹರಣ ಮಾಡಿ, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು
ಕಿಡ್ನ್ಯಾಪ್​ ಆಗಿದ್ದ ಉದ್ಯಮಿ
ರಾಮ್​, ಮೈಸೂರು
| Edited By: |

Updated on: Dec 08, 2025 | 6:09 PM

Share

ಮೈಸೂರು, ಡಿಸೆಂಬರ್​​ 08: ಹಣದಾಸೆಗೆ ಉದ್ಯಮಿಯನ್ನು ಕಿಡ್ನ್ಯಾಪ್ (Kidnapping) ಮಾಡಿದ್ದ ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು (police) ಬಂಧಿಸಿದ್ದಾರೆ. ಸಂತೋಷ್, ಅಭಿಷೇಕ್, ಪ್ರಜ್ವಲ್, ದರ್ಶನ್ ಬಂಧಿತರು. ಎರಡು ದಿನದ ಹಿಂದೆ ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಲೋಕೇಶ್​​​​ರನ್ನು ಅಪಹರಣ ಮಾಡಿ ಬಳಿಕ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಅಪಹರಣವಾಗಿದ್ದ ರಿಯಲ್ ಎಸ್ಟೇಟ್​​ ಉದ್ಯಮಿಯನ್ನು ರಕ್ಷಿಸಿದ್ದಾರೆ. ಜೊತೆಗೆ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ರೂ ಮೌಲ್ಯದ ಹಸುಗಳ ಕಳ್ಳತನ: ಒಂದು ಹಸುವಿನ ಕತ್ತು ಕೊಯ್ದ ಕೀಚಕರು

ಲೋಕೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಹಣಕಾಸು ವಹಿವಾಟು ಜೋರಾಗಿತ್ತು. ಲೋಕೇಶ್ ವ್ಯವಹಾರವನ್ನು ಹತ್ತಿರದಿಂದ ಗಮನಿಸಿದ್ದ ಸಂತೋಷ್ ಎಂಬಾತ ಮೊದಲು ಅವರನ್ನು ಪರಿಚಯ ಮಾಡಿಕೊಳ್ಳುತ್ತಾನೆ. ನಂತರ ಲೋಕೇಶ್ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಿ, ನಂತರ ಅಪಹರಣಕ್ಕೆ ಸಂಚು ರೂಪಿಸುತ್ತಾನೆ. ಸಂತೋಷ್ ತನ್ನ ಜೊತೆಗೆ ಸ್ನೇಹಿತರಾದ ಅಭಿಷೇಕ್, ಪ್ರಜ್ವಲ್, ದರ್ಶನ್ ಹಾಗೂ ಪ್ರೀತಂ ಸೇರಿಸಿಕೊಂಡು ಲೋಕೇಶ್ ಅಪರಹರಣಕ್ಕೆ ಸ್ಕೆಚ್ ಹಾಕುತ್ತಾರೆ.

ಕಣ್ಣಿಗೆ ಕಾರದಪುಡಿ ಎರಚಿ ಕಿಡ್ನ್ಯಾಪ್

ಡಿಸೆಂಬರ್ 6ರಂದು ಶನಿವಾರ ರಾತ್ರಿ 8.15 ಗಂಟೆ ಸಮಯ‌. ವಿಜಯನಗರ 3ನೇ ಹಂತದ ಹೆರಿಟೇಜ್ ಕ್ಲಬ್​ನಿಂದ ಮನೆಗೆ ತೆರಳಳು ಹೊರಗೆ ಬಂದ ಲೋಕೇಶ್ ಮೇಲೆ ಅಟ್ಯಾಕ್ ಮಾಡಿದ ಇವರು ಕಣ್ಣಿಗೆ ಖಾರದ ಪುಡಿ ಎರಚಿ ಬಲವಂತವಾಗಿ ಟಾಟಾ ಸುಮೋ ವಾಹನದಲ್ಲಿ ಎತ್ತಿ ಹಾಕಿಕೊಂಡು ಅಪಹರಣ ಮಾಡುತ್ತಾರೆ. ಲೋಕೇಶ್ ನನ್ನು ಒತ್ತೆಯಾಳು ಆಗಿರಿಸಿಕೊಂಡ ಆರೋಪಿಗಳು ಆರಂಭದಲ್ಲಿ ಒಂದು ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದರು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಕಿಡ್ನ್ಯಾಪ್ ಆದ ಲೋಕೇಶ್​​ ಪತ್ನಿ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಕೆ.ಆರ್ ನಗರದ ಹಂಪಾಪುರ ಬಳಿ ವಶಕ್ಕೆ ಪಡೆದು ಲೋಕೇಶ್​​ರನ್ನು ರಕ್ಷಣೆ ಮಾಡಿದ್ದಾರೆ.

ಇನ್ನು ಪ್ರಕರಣದ ಕಿಂಗ್ ಪಿನ್ ಸಂತೋಷ್, ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್​​.ಎಸ್ ರಸ್ತೆಯ ಪಂಪ್ ಹೊಸಳ್ಳಿ ಗ್ರಾಮದವನು. ಈತನಿಗೆ ನಾಲ್ಕು ತಿಂಗಳಿನಿಂದ ಲೋಕೇಶ್​​ ಪರಿಚಯವಿತ್ತು. ಅಷ್ಟೇ ಅಲ್ಲದೆ ಲೋಕೇಶ್ ಫೈನಾನ್ಸ್, ರಿಯಲ್ ಎಸ್ಟೇಟ್​​ನಲ್ಲಿ ಹಣ ಮಾಡಿಕೊಂಡಿರುವ ವಿಚಾರ ಗೊತ್ತಿತ್ತು. ಹಾಗಾಗಿ ತನ್ನ ಇತರೆ ಸ್ನೇಹಿತರೊಂದಿಗೆ ಸೇರಿ ಲೋಕೇಶ್​​ರನ್ನ ಅಪಹರಣ ಮಾಡಿದ್ದ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, 5 ತಂಡಗಳನ್ನ ರಚಿಸಿ ಕಾರ್ಯಾಚರಣೆ ನಡೆಸಿದರು. ಮೊದಲಿಗೆ ಪತ್ನಿಯ ಮೂಲಕ ಮಾಹಿತಿ ಪಡೆದುಕೊಂಡ ಪೊಲೀಸರು 30 ಲಕ್ಷ ರೂ. ಹಣ ಕೊಡುವುದಾಗಿ ಆರೋಪಿ ಪ್ರೀತಂ ಎಂಬಾತನನ್ನು ಕರೆಸಿಕೊಂಡಿದ್ದಾರೆ. ಮತ್ತೊಂದು ಕಡೆ ಕೆಆರ್​ ನಗರ ಹಂಪಾಪುರ ಬಳಿ ಲೋಕೇಶ್ ಇರಿಸಿಕೊಂಡಿದ್ದನ್ನ ಟವರ್ ಲೊಕೇಷನ್ ಮೂಲಕ ಪತ್ತೆ ಹಚ್ಚಿದ್ದಾರೆ. ತಕ್ಷಣ ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ‌ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಗಾರೆ ಕೆಲಸ, ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿಗಳು ಸುಲಭವಾಗಿ ಹಣ ಮಾಡುವ ದಾರಿ ಅಂತಾ ಕಿಡ್ನ್ಯಾಪ್ ಮಾಡಿ ಜೈಲು ಸೇರಿದ್ದಾರೆ. ಒಟ್ಟಿನಲ್ಲಿ ಜೊತೆಗಿದ್ದವರೇ ಹಣದ ಆಸೆಗಾಗಿ ಈ ರೀತಿ ಮಾಡಿರುವುದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ