ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Mysuru Gang Rape Case: ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಇದೀಗ, ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಸಾಂಕೇತಿಕ ಚಿತ್ರ
Edited By:

Updated on: Sep 07, 2021 | 7:41 PM

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಪೊಲೀಸರು ಹಾಜರುಪಡಿಸಿದ್ದರು. ಇದೀಗ, ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು (ಸೆಪ್ಟೆಂಬರ್ 7) ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು ಇಂದು ಪೊಲೀಸರು ಹಾಜರುಪಡಿಸಿದ್ದರು. ಇಂದಿಗೆ 10 ದಿನದ ಪೊಲೀಸ್ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ಮೈಸೂರು: ಸಾಮೂಹಿಕ ಅತ್ಯಾಚಾರ ಆರೋಪಿಗಳ ಪೊಲೀಸ್​ ಕಸ್ಟಡಿ ಅವಧಿ ಅಂತ್ಯ; ಇಂದು ನ್ಯಾಯಾಧೀಶರ ಮುಂದೆ ಹಾಜರು

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ