ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ

TV9 Digital Desk

| Edited By: ganapathi bhat

Updated on:Sep 23, 2021 | 5:17 PM

Mysuru: ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು ಮಾಡಲಾಗಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ
ಪ್ರಾತಿನಿಧಿಕ ಚಿತ್ರ

Follow us on

ಮೈಸೂರು: ಇಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗುರುತು ಪತ್ತೆ ಕಾರ್ಯ ನಡೆಸಲಾಗಿದೆ. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು ಮಾಡಲಾಗಿದೆ. ಬಳಿಕ, ಇಂದು ಜೈಲಿನಲ್ಲಿ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮಾಡಲಾಗಿದೆ.

ಮೈಸೂರಿನ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಐಡೆಂಟಿಫಿಕೇಶನ್ ಪೆರೇಡ್ ಮುಕ್ತಾಯವಾಗಿದೆ. ಸಂತ್ರಸ್ತೆ ಹಾಗೂ ಸ್ನೇಹಿತ ಆರೋಪಿಗಳ ಗುರುತು ಪತ್ತೆ ಮಾಡಿದ್ದಾರೆ. ಪೊಲೀಸರು ಇಬ್ಬರಿಂದಲೂ ಐಡೆಂಟಿಫಿಕೇಶನ್ ಮಾಡಿಸಿದ್ದಾರೆ. ಐಡೆಂಟಿಫಿಕೇಶನ್ ಪೆರೇಡ್ ಮಹತ್ವದ ಸಾಕ್ಷಿಯಾಗಲಿದೆ. ನಿನ್ನೆಯಷ್ಟೇ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದರು. ಪೊಲೀಸರ ಮುಂದೆಯೂ ಸಂತ್ರಸ್ತೆ ಹಾಗೂ ಸ್ನೇಹಿತ ಹೇಳಿಕೆ ನೀಡಿದ್ದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿತ್ತು. ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7 ರಂದು 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿತ್ತು. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಹಾಜರುಪಡಿಸಿದ್ದರು. ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿತ್ತು.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿಯಲಾಗಿತ್ತು. ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು  ಪೊಲೀಸರು ಹಾಜರುಪಡಿಸಿದ್ದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೈಸೂರು ಅತ್ಯಾಚಾರ ಪ್ರಕರಣ: ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್

ಇದನ್ನೂ ಓದಿ: ಮೈಸೂರು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಗೆ ಕ್ರಮ; ಮೈಸೂರು ಪೊಲೀಸರ ಕುರಿತು ಕಲಾಪದಲ್ಲಿ ಶ್ಲಾಘನೆ

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada