Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಅತ್ಯಾಚಾರದಲ್ಲಿ ಇದ್ದಿದ್ದು 6 ಜನ ಮಾತ್ರ ಅಲ್ಲ; ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿಗಳು

ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಆರೋಪಿಗಳು ತನಿಖೆ ವೇಳೆ ಮತ್ತೊಂದು ವಿಚಾರವನ್ನು ಬಾಯ್ಬಿಟ್ಟಿದ್ದು, ದುಷ್ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ ಕೂಡಾ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರದಲ್ಲಿ ಇದ್ದಿದ್ದು 6 ಜನ ಮಾತ್ರ ಅಲ್ಲ; ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿಗಳು
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on:Aug 29, 2021 | 8:30 AM

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಆರೋಪಿಗಳು ತನಿಖೆ ವೇಳೆ ಮತ್ತೊಂದು ವಿಚಾರವನ್ನು ಬಾಯ್ಬಿಟ್ಟಿದ್ದು, ದುಷ್ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ ಕೂಡಾ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಆ ಮೂಲಕ ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದು, 5 ಜನರನ್ನು ಪತ್ತೆ ಹಚ್ಚಿದ್ದೇವೆ ಓರ್ವ ತಲೆಮರಿಸಿಕೊಂಡಿದ್ದಾನೆ ಎಂದಿದ್ದ ಪೊಲೀಸರಿಗೆ ಇನ್ನೂ ಒಬ್ಬ ತಪ್ಪಿಸಿಕೊಂಡಿರುವುದು ಗೊತ್ತಾಗಿದೆ.

ಸದ್ಯ ತಮಿಳುನಾಡು ಮೂಲದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಿದ್ದರು. ಆದರೆ, ಈಗ ತಪ್ಪಿಸಿಕೊಂಡಿರುವುದು ಇಬ್ಬರು ಎಂಬ ಮಾಹಿತಿ ಲಭ್ಯವಾಗಿದ್ದು, ಒಟ್ಟು 7 ಜನ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಹೀಗಾಗಿ ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಇನ್ನಿಬ್ಬರಿಗಾಗಿ  ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

ಇದೀಗ ಬಂಧಿತ ಐವರು ಆರೋಪಿಗಳನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮೈಸೂರಿನ 3ನೇ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಆರೋಪಿಗಳನ್ನ ಜಡ್ಜ್‌ ಎದುರು ಹಾಜರುಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ 3ನೇ ಜೆಎಂಎಫ್‌ಸಿ ಜಡ್ಜ್ ಬಂಧಿತ ಐವರು ಆರೋಪಿಗಳನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಇಂದಿನಿಂದ ಪೊಲೀಸ್ ಕಸ್ಟಡಿಯಲ್ಲಿ ಆರೋಪಿಗಳಿಗೆ ತೀವ್ರ ವಿಚಾರಣೆ ನಡೆಯಲಿದ್ದು, ಕಾಮುಕರಿಂದ ಮತ್ತಷ್ಟು ಮಾಹಿತಿ ಕಲೆ ಹಾಕುವ ವಿಶ್ವಾಸದಲ್ಲಿ ಮೈಸೂರು ಪೊಲೀಸರಿದ್ದಾರೆ.

ಈ ಬಗ್ಗೆ ನಿನ್ನೆ ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದರು. ಇದರಲ್ಲಿ ಒಬ್ಬ ಬಾಲ ಆರೋಪಿ (juvenile) ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದರು.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ 

ಮದುವೆ ಮಾಡಿಕೊಟ್ಟಿಲ್ಲ ಎಂದು ಹುಡುಗಿಯ ತಂದೆಯನ್ನೇ ಕೊಂದಿದ್ದ; ಮೈಸೂರು ರೇಪ್ ಕೇಸ್ ಆರೋಪಿಯ ಹಿನ್ನೆಲೆ ಬಯಲಿಗೆ

(Mysuru Gang Rape Case Updates total 7 people involved in Rape)

Published On - 8:10 am, Sun, 29 August 21

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ