Mysuru gang rape : ಗ್ಯಾಂಗ್‌ರೇಪ್ ಪ್ರಕರಣ- ತಮಿಳುನಾಡಲ್ಲಿ ಐದು ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ

ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲವೆನ್ನುವ ಬಗ್ಗೆ ಮಾಹಿತಿ ಬಂದಿದ್ದು, ಈ ಹಿಂದೆ ಇಂಥದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂಬುದು ಗಮನಾರ್ಹ. ಈ ಮಧ್ಯೆ, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ.

Mysuru gang rape : ಗ್ಯಾಂಗ್‌ರೇಪ್ ಪ್ರಕರಣ- ತಮಿಳುನಾಡಲ್ಲಿ ಐದು ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ
ಗ್ಯಾಂಗ್‌ರೇಪ್ ಪ್ರಕರಣ: ತಮಿಳುನಾಡಲ್ಲಿ 5 ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 28, 2021 | 10:44 AM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್​ 24 ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ 6 ಆರೋಪಿಗಳ ಪೈಕಿ 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿಗಳ ತಂಡ ಈ ಕುಕೃತ್ಯ ನಡೆಸಿರಬಹುದು ಎನ್ನಲಾಗಿತ್ತು. ಆದರೆ ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎನ್ನುವ ಬಗ್ಗೆ ಮಾಹಿತಿ ಈಗ ಲಭ್ಯವಾಗಿದೆ.

ಇನ್ನೆರಡು ಗಂಟೆಯಲ್ಲಿ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ -ಗೃಹ ಸಚಿವ ಆರಗ ಜ್ಞಾನೇಂದ್ರ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ 5 ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಕಾರ್ಯಾಚರಣೆ ಸಕ್ಸಸ್​ ಆಗಿದೆ ಎಂದು ಹೇಳಿದ್ದಾರೆ. ಇನ್ನೆರಡು ಗಂಟೆಯಲ್ಲಿ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡುತ್ತೇವೆ. ಪೊಲೀಸರು ಅಥವಾ ನಾನೇ ಅಧಿಕೃತ ಮಾಹಿತಿ ನೀಡುವೆ ಎಂದೂ ಹೇಳಿದ್ದಾರೆ.

ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎನ್ನುವ ಬಗ್ಗೆ ಮಾಹಿತಿ ಬಂದಿದ್ದು, ಈ ಹಿಂದೆ ಇಂಥದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂಬುದು ಗಮನಾರ್ಹ. ಈ ಮಧ್ಯೆ, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ.

ಆರೋಪಿಗಳು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಚಲನವಲನದ ಮೇಲೆ ನಿಗಾವಹಿಸಿದ್ದರು. ಸಂತ್ರಸ್ತೆ ಮತ್ತು ಯುವಕ 3 ದಿನಗಳ ಕಾಲ ಒಂದೇ ಸ್ಥಳಕ್ಕೆ ಬರುತ್ತಿದ್ದರು.ಅವರಿಬ್ಬರನ್ನೂ 3 ದಿನ ಫಾಲೋ ಮಾಡಿ 4ನೇ ದಿನ ಗ್ಯಾಂಗ್​ ದಾಳಿ ಮಾಡಿತ್ತು. ಆ. 24ರಂದು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು. ವಶಕ್ಕೆ ಪಡೆದಿರುವ ಐವರು ಆರೋಪಿಗಳು ಕೂಲಿಕಾರ್ಮಿಕರು. ಪ್ರಕರಣದಲ್ಲಿ ಇನ್ನೂ ಯಾರಾದ್ರೂ ಇದ್ದಾರಾ ಎಂದೂ ತನಿಖೆ ನಡೆಯುತ್ತಿದೆ. ಪೊಲೀಸರು ಆರೋಪಿಗಳನ್ನು ಮೈಸೂರಿಗೆ ಕರೆತಂದ ನಂತರ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

Mysuru gang rape: ಯುವಕನ ತಂದೆಯೇ ತಮ್ಮ ಕಾರಿನಲ್ಲಿ ಸ್ಥಳಕ್ಕೆ ಹೋಗಿ ಇಬ್ಬರನ್ನೂ ಕರೆದುಕೊಂಡು ಬಂದಿದ್ದರು

(mysuru gang rape mysuru police arrest 5 accused in tamilnadu)

Published On - 9:12 am, Sat, 28 August 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್