ಮೈಸೂರು ರಮ್ಮನಹಳ್ಳಿಯಲ್ಲಿ ಯುವಕನ ಬರ್ಬರ ಹತ್ಯೆ, ಕೊರಟಗೆರೆಯಲ್ಲಿ ಒಂಟಿ ವೃದ್ಧೆಯ ಕೊಲೆ ಶಂಕೆ
ಮೈಸೂರಿನ ರಮ್ಮನಹಳ್ಳಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೆಸಿಬಿ ಚಾಲಕನಾಗಿದ್ದ ಅರ್ಜುನ್ (24) ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ, ಬಳಿಕ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಪರಿಚಯಸ್ಥರೇ ಅರ್ಜುನ್‌ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಮೈಸೂರು: ಮೈಸೂರಿನ ರಮ್ಮನಹಳ್ಳಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೆಸಿಬಿ ಚಾಲಕನಾಗಿದ್ದ ಅರ್ಜುನ್ (24) ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ, ಬಳಿಕ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಪರಿಚಯಸ್ಥರೇ ಅರ್ಜುನ್‌ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪಾತಕಿಗಳು ಕಳೆದ ರಾತ್ರಿ ಫೋನ್ ಮಾಡಿ ಕರೆಸಿಕೊಂಡು ಕೊಲೆ ಮಾಡಿರುವ ಸಾಧ್ಯತೆಯಿದೆ. ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅಡಿಷನಲ್ ಎಸ್ ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರಟಗೆರೆಯಲ್ಲಿ ಒಂಟಿ ವೃದ್ಧೆಯ ಅನುಮಾನಾಸ್ಪದ ಸಾವು, ಕೊಲೆ ಶಂಕೆ ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊರಟಗೆರೆಯಲ್ಲಿ ಲಕ್ಷ್ಮಮ್ಮ(65) ಎಂಬ ಒಂಟಿ ವೃದ್ಧೆ ಅನುಮಾನಾಸ್ಪದ ಸಾವು ಕಂಡಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ವೃದ್ಧೆಯ ಹತ್ಯೆಗೈದು ಚಿನ್ನಾಭರಣ, ಹಣ ದೋಚಿರುವುದು ಮೇಲ್ನೋಟಕ್ಕೆ ಕಡುಬಂದಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐದು ತಿಂಗಳ ಹಿಂದೆ ಪತಿ ಮೃತಪಟ್ಟಿದ್ದರಿಂದ ಮಹಿಳೆ ಒಂಟಿಯಾಗೇ ವಾಸವಾಗಿದ್ದರು. ರಾತ್ರಿ ಪುತ್ರಿ ಜೊತೆಗೆ ಫೋನಿನಲ್ಲಿ ಮಾತನಾಡಿದ್ದ ಮಹಿಳೆ ಬೆಳಗಾಗೋ ಅಷ್ಟರಲ್ಲಿ ಕೊಲೆಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಶ್ರೀನಿವಾಸ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪಾವಗಡ: ಮನೆಯಲ್ಲಿದ್ದ ವೃದ್ದೆಯ ಮಾಂಗಲ್ಯ ಸರ ಕದ್ದು ಪರಾರಿ ಮನೆಯಲ್ಲಿ ಇದ್ದ ವೃದ್ದೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಗರತ್ನಮ್ಮ ಹಾಗೂ ಪತಿ ನಾರಾಯಣಪ್ಪ ಮನೆಯಲ್ಲಿ ಇರುವುದನ್ನ ಗಮನಿಸಿದ ಕಳ್ಳರು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ನಾಗರತ್ನಮ್ಮ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯ ಸರವನ್ನ ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮೊಳಕಾಲ್ಮೂರು ಬಳಿ ಕಾರುಗಳ ಡಿಕ್ಕಿ: ಬಳ್ಳಾರಿ ಮಹಿಳಾ ಹೆಡ್ ಕಾನ್ಸ್ಟೇಬಲ್, ಉಪನ್ಯಾಸಕ ಸಾವು
Published On - 9:33 am, Thu, 16 December 21