AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ? ಆಕಸ್ಮಿಕವಾಗಿ ಶೂಟೌಟ್​ಗೆ ಬಲಿಯಾದ ಅಮಾಯಕ ಯುವಕ

ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿ ಮಾಲೀಕನ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ ನೀಡಿರುವ ಅನುಮಾನ ವ್ಯಕ್ತವಾಗಿದ್ದು, ಮಾಲೀಕನ ಏಳಿಗೆ ಸಹಿಸದೆ ಸಂಬಂಧಿಕರೇ ಹೀಗೆ ಮಾಡಿದ್ದಾರೆ ಎಂಬ ಶಂಕೆ ದಟ್ಟವಾಗಿದೆ.

ಮೈಸೂರಿನಲ್ಲಿ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ? ಆಕಸ್ಮಿಕವಾಗಿ ಶೂಟೌಟ್​ಗೆ ಬಲಿಯಾದ ಅಮಾಯಕ ಯುವಕ
ಸಿಸಿಟಿವಿಯಲ್ಲಿ ಸೆರೆಯಾದ ದರೋಡೆ ದೃಶ್ಯ
TV9 Web
| Updated By: Skanda|

Updated on:Aug 27, 2021 | 11:29 AM

Share

ಮೈಸೂರು: ಮೈಸೂರಿನ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿಯಲ್ಲಿ ನಡೆದ ದರೋಡೆ, ಶೂಟೌಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ರಾಜಸ್ಥಾನ ಮೂಲದ ಸತ್ಯೇಂದ್ರ ಪಾಲ್ ಸಿಂಗ್, ತೇಜವೀರ್ ಸಿಂಗ್ ಬಂಧನದ ನಂತರ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿ ಮಾಲೀಕನ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ ನೀಡಿರುವ ಅನುಮಾನ ವ್ಯಕ್ತವಾಗಿದ್ದು, ಮಾಲೀಕನ ಏಳಿಗೆ ಸಹಿಸದೆ ಸಂಬಂಧಿಕರೇ ಹೀಗೆ ಮಾಡಿದ್ದಾರೆ ಎಂಬ ಶಂಕೆ ದಟ್ಟವಾಗಿದೆ.

ಅಸಲಿಗೆ ಸುಪಾರಿಯ ಟಾರ್ಗೆಟ್​ ಅಂಗಡಿ ಮಾಲೀಕನಾಗಿದ್ದ. ಆದರೆ ಆಕಸ್ಮಿಕವಾಗಿ ಶೂಟೌಟ್​ಗೆ ಅಮಾಯಕ ಯುವಕ ಬಲಿಯಾಗಿದ್ದಾನೆ ಎಂಬ ಸಂಗತಿ ಬಯಲಾಗಿದೆ. ಇನ್ನೊಂದಷ್ಟು ಮೂಲಗಳ ಪ್ರಕಾರ, ಕೆಲ ತಿಂಗಳ ಹಿಂದೆ ಅಂಗಡಿ ಇಂಟಿರಿಯರ್ ಕೆಲಸ ಮಾಡಿದವರಿಂದಲೇ ಕೃತ್ಯ ನಡೆದಿದೆ ಎನ್ನಲಾಗಿದೆ.

ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಸ್ನೇಹಿತನ ಹೇಳಿಕೆ ಲಭ್ಯ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂದು ವಿವರಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಯುವಕ ಹೇಳಿದ ವಿಷಯ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸುವಂತಿದೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.

ಆಗಸ್ಟ್​ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ಹೋಗಿ 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ರೂಪಾಯಿ ಹಣ ಕೊಡುವಂತೆ ಒತ್ತಾಯ ಮಾಡಿದರು. ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಪೊಲೀಸರಿಗೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.

(Mysuru Jewellery Shop Robbery and Shootout case police suspects relatives of Jewellery Shop owner behind the incident)

ಇದನ್ನೂ ಓದಿ: ‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ

Published On - 11:00 am, Fri, 27 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ