‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಖ್ಯಾತ ಕಲಾವಿದ, ಮೈಸೂರಿನ ಬಂಡಿಕೇರಿಯ ನಿವಾಸಿ ಕುಮಾರಸ್ವಾಮಿ ಅವರು ನಿಧನರಾಗಿದ್ದಾರೆ. ಕಂಸಾಳೆ ಕಲಾವಿದ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕುಮಾರಸ್ವಾಮಿಯವರು ನಟ ಶಿವರಾಜ್ ಕುಮಾರ್ ಅಭಿನಯದ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ ಜಂಗಮದೇವ’ ಹಾಡಿಗೆ ಕುಮಾರಸ್ವಾಮಿ ಅವರು ಕಂಸಾಳೆ ಸಂಗೀತದ ನೃತ್ಯ ಸಂಯೋಜಿಸಿದ್ದರು.

‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
ಕಂಸಾಳೆ ಖ್ಯಾತ ಕಲಾವಿದ ಕುಮಾರಸ್ವಾಮಿ
Follow us
ರಮೇಶ್ ಬಿ. ಜವಳಗೇರಾ
|

Updated on:Nov 25, 2024 | 10:22 PM

ಮೈಸೂರು, (ನವೆಂಬರ್ 25): ‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಖ್ಯಾತ ಕಲಾವಿದ, ಮೈಸೂರಿನ ಬಂಡಿಕೇರಿಯ ನಿವಾಸಿ ಕುಮಾರಸ್ವಾಮಿ (Kamsale Kumaraswamy) ಅವರು ಇಂದು (ನವೆಂಬರ್ 25) ನಿಧನರಾಗಿದ್ದಾರೆ. ನಾಳೆ ಅಂದರೆ ನ.25 ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಗಾರದಲ್ಲಿ ಇವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನು ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಸಂತಾಪ

ಮೈಸೂರಿನ ಹಿರಿಯ ಜಾನಪದ ಕಲಾವಿದ ಕುಮಾರಸ್ವಾಮಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ ತಂದೆ ಕಂಸಾಳೆ ಮಹಾದೇವಯ್ಯ ಅವರಂತೆ ಕಲಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜಾನಪದ ಸೊಬಗನ್ನು ಕನ್ನಡಿಗರಿಗೆ ಉಣಬಡಿಸಿದ ಕುಮಾರಸ್ವಾಮಿ ಅವರ ಕಲಾಸೇವೆ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಮತ್ತು ಬಂಧುಮಿತ್ರರಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿಯವರ ಬಗ್ಗೆ ಒಂದಿಷ್ಟು ಮಾಹಿತಿ

ವರಕೋಡು ಸಮೀಪದ ಬಡಗಲಹುಂಡಿಯಲ್ಲಿ 1951ರಲ್ಲಿ ಜನಿಸಿದ ಇವರು, ತಂದೆ ಕಂಸಾಳೆ ಮಹಾದೇವಯ್ಯ ಅವರಿಂದ ಕಂಸಾಳೆಯನ್ನು ಕಲಿತಿದ್ದರು. 7ನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿ ತಂದೆಯೊಂದಿಗೆ ಪ್ರದರ್ಶನಗಳನ್ನು ನೀಡಲಾರಂಭಿಸಿ, ಅದರಲ್ಲೇ ಮುಂದುವರಿದರು.

ಕಂಸಾಳೆ, ಹಾಡುಗಾರಿಕೆ, ನೃತ್ಯ ಪ್ರಕಾರ, ಬೀಸು ಕಂಸಾಳೆಯಲ್ಲಿ ಪರಿಣತಿ ಗಳಿಸಿದ್ದ ಅವರು, ವಿವಿಧ ವಿಷಯಗಳನ್ನು ಕಂಸಾಳೆಗೆ ಒಗ್ಗಿಸಿಕೊಂಡು ಪ್ರಸ್ತುತಪಡಿಸುತ್ತಿದ್ದರು. ಇವರಿಗೆ ‘ಜಾನಪದ ಲೋಕ’ ಪ್ರಶಸ್ತಿ, ಕನ್ನಡ ಜಾನಪದ ಪರಿಷತ್ತಿನ ‘ಜಾನಪದ ಪ್ರಪಂಚ’, ಕನ್ನಡ ಬಳಗದ ‘ಕಂಸಾಳೆ ಜಾನಪದ ರತ್ನ’, ಕನ್ನಡ ಕ್ರಾಂತಿ ದಳದ ‘ಕಂಸಾಳೆ ಕಂಠೀರವ’ ಬಿರುದು ಸೇರಿ ವಿವಿಧ ಬಿರುದು, ಪ್ರಶಸ್ತಿಗಳನ್ನು ಪಡೆದಿದ್ದರು.

‘ಕೋಲು ಮಂಡೆ ಜಂಗಮದೇವ’ದಿಂದ ಫೇಮಸ್

ನಟ ಶಿವರಾಜ್ ಕುಮಾರ್ ಅಭಿನಯದ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ ಜಂಗಮದೇವ’ ಹಾಡಿಗೆ ಕುಮಾರಸ್ವಾಮಿ ಅವರು ಕಂಸಾಳೆ ಸಂಗೀತದ ನೃತ್ಯ ಸಂಯೋಜಿಸಿದ್ದರು. ಆ ಮೂಲಕ ವರನಟ ರಾಜಕುಮಾ‌ರ್ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು. 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇವರು, ಇಟಲಿ, ರೋಂ, ಟರ್ಕಿ ಸೇರಿ ದೇಶ- ವಿದೇಶಗಳಲ್ಲಿ 600ಕ್ಕೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದ್ದರು.

ಹೀಗೆ ಜಾನಪದ ಕಲಾವಿದ ಕಂಸಾಳೆ ಮಹಾದೇವಯ್ಯ ಅವರ ಪುತ್ರರಾದ ಕುಮಾರಸ್ವಾಮಿ, ಬಾಲ್ಯದಿಂದಲೇ ತಂದೆ ಜತೆ ಕಂಸಾಳೆಯನ್ನು ಮೈಗೂಡಿಸಿಕೊಂಡು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:20 pm, Mon, 25 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ