ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿ ಭೇಟಿ ಬಳಿಕ ಒಂದು ಮಹತ್ವದ ತೀರ್ಮಾನಕ್ಕೆ ಬಂದ ಪ್ರತಾಪ್ ಸಿಂಹ

| Updated By: Rakesh Nayak Manchi

Updated on: Mar 12, 2024 | 10:20 PM

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಂಸದ ಪ್ರತಾಪ್ ಸಿಂಹ ಅವರ ಕೈತಪ್ಪುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇದರಿಂದಾಗಿ ಅಸಮಾಧಾನಗೊಂಡಿರುವ ಪ್ರತಾಪ್ ಸಿಂಹ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಆಹ್ವಾನಿಸಿದ್ದರು. ಅದರಂತೆ ಅಗರ್ವಾಲ್ ಅವರನ್ನು ಭೇಟಿಯಾದ ಪ್ರತಾಪ್ ಸಿಂಹ ಸುದೀರ್ಘ ಚರ್ಚೆ ನಡೆಸಿದರು. ಬಳಿಕ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿ ಭೇಟಿ ಬಳಿಕ ಒಂದು ಮಹತ್ವದ ತೀರ್ಮಾನಕ್ಕೆ ಬಂದ ಪ್ರತಾಪ್ ಸಿಂಹ
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಭೇಟಿಯಾದ ಸಂಸದ ಪ್ರತಾಪ್ ಸಿಂಹ
Follow us on

ಬೆಂಗಳೂರು, ಮಾ.12: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಂಸದ ಪ್ರತಾಪ್ ಸಿಂಹ (Pratap Simha) ಅವರ ಕೈತಪ್ಪುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಕೆಲಸ ಹಾಗೂ ಹಿಂದುತ್ವದ ಮೇಲೆ ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪುತ್ತಿರುವ ವಿಚಾರ ತಿಳಿದು ಇಡೀ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸ್ವತಃ ಪ್ರತಾಪ್ ಸಿಂಹ ಅವರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ (Radha Mohandas Agarwal) ಅವರು ಸಂಸದರನ್ನು ಆಹ್ವಾನಿಸಿದ್ದರು. ಅದರಂತೆ ಅಗರ್ವಾಲ್ ಅವರನ್ನು ಭೇಟಿಯಾದ ಪ್ರತಾಪ್ ಸಿಂಹ ಸುದೀರ್ಘ ಚರ್ಚೆ ನಡೆಸಿ ತನ್ನ ಸಾಧನೆಯ ವರದಿ ಒಪ್ಪಿಸಿದರು.

ಅಗರ್ವಾಲ್ ಭೇಟಿ ಬಳಿಕ ಫೇಸ್​ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರತಾಪ್ ಸಿಂಹ, ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು. “ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ನಾನು ಕೇವಲ ಒಂದು ಗಂಟೆ ಭೇಟಿ ಮಾಡಿದೆ. ನಾನು ಮೊದಲೇ ಹೇಳಿದ್ದೇನೆ ಮತ್ತು ಮತ್ತೊಮ್ಮೆ ಹೇಳುತ್ತಿದ್ದೇನೆ, ನರೇಂದ್ರ ಮೋದಿ ಇಲ್ಲದೆ ನಾನು ಏನೂ ಅಲ್ಲ. ನನಗೆ ಟಿಕೆಟ್ ಸಿಗುತ್ತದೆ ಎಂದು ಭಾವಿಸುತ್ತೇನೆ, ಇಲ್ಲದಿದ್ದರೆ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಧನ್ಯವಾದ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ: ನಡುರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಕಣ್ಣೀರು!

ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಸದ್ಯದ ಹಾಟ್ ಟಾಪಿಕ್ ಆಗಿದೆ.‌ 10 ವರ್ಷ ಉತ್ತಮ ಕೆಲಸ‌ ಮಾಡಿದರೂ ಪಕ್ಷ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಕಾರಣ ಏನು ಎನ್ನುವುದು ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.

ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್

ಬಿಎಸ್​ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ ಯಡಿಯೂರಪ್ಪ-ವಿಜಯೇಂದ್ರ ಎಂದು ಪೋಸ್ಟ್ ಮಾಡಿದ್ದಾರೆ.

ಅಪ್ಪ-ಮಕ್ಕಳಿಗೆ ಯತ್ನಾಳ್ ಬೇಡ, ಸಿಟಿ ರವಿ ಬೇಡ, ಸೋಮಣ್ಣ ಬೇಡ, ಎನ್.ಆರ್. ರಮೇಶ್ ಬೇಡ, ಈಗ ಪ್ರತಾಪ್ ಸಿಂಹ ಬೇಡ, ಹಿಂದುತ್ವವೂ ಬೇಡ. ಎಲ್ಲವೂ ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕು ಅಂದರೆ. ಇನ್ನು ರಾಜ್ಯದಲ್ಲಿ ಹೇಗೆ ಬಿಜೆಪಿ ಬೆಳೆಯುತ್ತೆ ಸ್ವಾಮಿ ಎಂದು ಆಕ್ರೋಶ ಹೊರಹಾಕಲಾಗುತ್ತಿದೆ. ಇದೀಗಾ ಒಕ್ಕಲಿಗರ ಸಂಘ ಕೂಡ ಸಿಡಿದೆದ್ದಿದೆ. ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ಕೊಟ್ಟು ಒಕ್ಕಲಿಗರ ತಾಳ್ಮೆ ಕೆಣಕುವಂತೆ ಮಾಡಬೇಡಿ ಅಂತ ಎಚ್ಚರಿಕೆ ಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ