ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮರಣ

ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮರಣ
ಅಪಘಾತದ ದೃಶ್ಯ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಇಮ್ರಾನ್ ಪಾಷಾ(30), ಯಾಸ್ಮಿನ್(28), ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ಟೋಬರ್ 24ರಂದು ಇಮ್ರಾನ್ ಪಾಷಾಗೆ ಮದುವೆ ನಿಶ್ಚಯವಾಗಿತ್ತು. ಮದುವೆ ಬಟ್ಟೆ ಖರೀದಿಗೆ ಕುಟುಂಬ ಸಮೇತ ಮೈಸೂರಿಗೆ ಬರುತ್ತಿದ್ದರು. ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

ಸಿಡಿಲು ಬಡಿದು ಸಾವು
ಬೆಂಗಳೂರು: ಸಿಡಿಲು ಬಡಿದು 46 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಸಿಡಿಲಿಗೆ ಟಿ.ದಾಸರಹಳ್ಳಿ ನಿವಾಸಿ ತಿಪ್ಪೇಸ್ವಾಮಿ(46) ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ತಿಪ್ಪೇಸ್ವಾಮಿ ಪುತ್ರ ನಿರಂಜನ್ಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 

100 ಸಿಸಿ ಬೈಕ್​ನಲ್ಲಿ ಕಾಶ್ಮೀರಕ್ಕೆ ರೈಡ್; ಧಾರವಾಡದ ಯುವಕನಿಂದ ಕೊರೊನಾ ಜಾಗೃತಿ ಅಭಿಯಾನ 

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Read Full Article

Click on your DTH Provider to Add TV9 Kannada