ಸಿದ್ದರಾಮಯ್ಯ ಕ್ಷೇತ್ರ ವರುಣಾ ಪಂಚಾಯ್ತಿ ಲೇಡಿ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ: ಕಾರಣವೇನು?

ಮೈಸೂರಿನ ವರುಣಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ. ಸದ್ಯ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಕ್ಷೇತ್ರ ವರುಣಾ ಪಂಚಾಯ್ತಿ ಲೇಡಿ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ: ಕಾರಣವೇನು?
ಪ್ರಾತಿನಿಧಿಕ ಚಿತ್ರ
Edited By:

Updated on: Nov 21, 2025 | 6:54 PM

ಮೈಸೂರು, ನವೆಂಬರ್​ 21: ನಿದ್ರೆ ಮಾತ್ರೆ ಸೇವಿಸಿ ಮಹಿಳಾ ಸಿಬ್ಬಂದಿ (Staff) ಕಚೇರಿಯಲ್ಲೇ ಆತ್ಮಹತ್ಯೆಗೆ  ಯತ್ನಿಸಿರುವಂತಹ (Suicide Attempt) ಘಟನೆ ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ವರುಣಾ ಪಂಚಾಯಿತಿ ಕಾರ್ಯದರ್ಶಿಯಾಗಿರುವ ದಿವ್ಯಾ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಅಸ್ವಸ್ಥಗೊಂಡಿದ್ದ ದಿವ್ಯಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ವರುಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ದಿವ್ಯಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿದ್ದ ದಿವ್ಯಾರನ್ನು ಪಿಡಿಓ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಂಡತಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

ಹೆಂಡತಿ ಮತ್ತು ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ವರಹ ಗ್ರಾಮದ ಬಳಿ ಇರುವ ಜಮೀನಿನಲ್ಲಿ ನಡೆದಿದೆ. ಕಿರುಕುಳದ ಬಗ್ಗೆ ವಿಡಿಯೋ ಮಾಡಿಟ್ಟು ಮಂಜುನಾಥ ಚಿಲ್ಲೋಜಿ (26) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್​: ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್​?

ಮೃತ ಮಂಜುನಾಥ ಕುರಿಗಾಯಿ ಆಗಿದ್ದು, ಚಿಲ್ಲೋಜಿ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿ. ಪತ್ನಿ ರೇಖಾ, ಮಾವ ಭೀರಪ್ಪ ಕವಲಾಪುರಿ, ಅತ್ತೆ ಸತ್ಯವ್ವ, ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳ ನೀಡಿದ ಆರೋಪಿಗಳು. ಇವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಟ್ಟಡದ ಮೇಲಿಂದ ತಳ್ಳಿ ಪತಿಯನ್ನೇ ಕೊಂದ ಪತ್ನಿ: ಜೀವ ತೆಗೆದ ಎರಡನೇ ಮದ್ವೆ

ಮಾನಸಿಕವಾಗಿ ತುಂಬಾ ಹಿಂಸೆ ಕೊಟ್ಟಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಂಜುನಾಥ ಕಣ್ಣೀರು ಹಾಕಿ ವಿಡಿಯೋ ಮಾಡಿದ್ದಾರೆ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮಂಜುನಾಥ ಚಿಲ್ಲೋಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Fri, 21 November 25