ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ಹೇಳಿಕೆ ದಾಖಲು

ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದಾಳೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ಹೇಳಿಕೆ ದಾಖಲು
ಪ್ರಾತಿನಿಧಿಕ ಚಿತ್ರ
Updated By: guruganesh bhat

Updated on: Sep 22, 2021 | 10:14 PM

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದಾಳೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7ರಂದು 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಹಾಜರುಪಡಿಸಿದ್ದರು.  ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು  ಪೊಲೀಸರು ಹಾಜರುಪಡಿಸಿದ್ದರು.

ಇದನ್ನೂ ಓದಿ: 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

(Mysuru massacre case victim statement registered by 2nd JMFC court)