ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ

| Updated By: guruganesh bhat

Updated on: Sep 07, 2021 | 5:38 PM

ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ
ಪ್ರಾತಿನಿಧಿಕ ಚಿತ್ರ
Follow us on

ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು (ಸೆಪ್ಟೆಂಬರ್ 7) ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು ಇಂದು ಪೊಲೀಸರು ಹಾಜರುಪಡಿಸಿದ್ದರು. ಇಂದಿಗೆ 10 ದಿನದ ಪೊಲೀಸ್ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ:

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(Mysuru massacre on student case 7th accused Arrested in Tamil Nadu)