AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​​ ಬಸ್​​ನಲ್ಲಿ ಕೂತ ಸಂಸದ ಯದುವೀರ್​​ ಫೋಟೋ ವೈರಲ್: ಮರುಗಿದ ನೆಟ್ಟಿಗರು

ಟಿ. ನರಸೀಪುರ ಗಣೇಶೋತ್ಸವ ವಿವಾದಕ್ಕೆ ಸಂಬಂಧಿಸಿ ಪ್ರತಿಭಟನೆ ವೇಳೆ ವಶಕ್ಕೆ ಪಡೆಯಲಾದ ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ಪೊಲೀಸ್ ಬಸ್‌ನಲ್ಲಿ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಪೊಲೀಸ್​​ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತುಗೊಳಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಅಶೋಕ್​​, ಸಂಸದ ಯದುವೀರ್​​ ಸೇರಿ ಹಲವರು ಭಾಗಿಯಾಗಿದ್ದರು.

ಪೊಲೀಸ್​​ ಬಸ್​​ನಲ್ಲಿ ಕೂತ ಸಂಸದ ಯದುವೀರ್​​ ಫೋಟೋ ವೈರಲ್: ಮರುಗಿದ ನೆಟ್ಟಿಗರು
ಪೊಲೀಸ್​​ ಬಸ್​​ನಲ್ಲಿ ಕೂತ ಸಂಸದ ಯದುವೀರ್​​ ಫೋಟೋ ವೈರಲ್Image Credit source: Yaduveer Wadiyar Instagram Page
ಪ್ರಸನ್ನ ಹೆಗಡೆ
|

Updated on: Sep 14, 2026 | 3:44 PM

Share

ಮೈಸೂರು, ಸೆಪ್ಟೆಂಬರ್​​ 14: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಿ. ನರಸೀಪುರ ಠಾಣೆಯ ಪೊಲೀಸ್​​ ಇನ್ಸೆಪೆಕ್ಟರ್​​ ಹೇಳಿಕೆ ಖಂಡಿಸಿ ನಿನ್ನೆ (ಸೆ.13) ವಿಪಕ್ಷ ನಾಯಕ ಆರ್​​. ಅಶೋಕ್​​ ಅವರ ನೇತೃತ್ವದಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾ ನಿರತ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆ ಸಂದರ್ಭ ಪೊಲೀಸ್​​ ಬಸ್​​ನಲ್ಲಿ ಕೂತ ಮೈಸೂರು ಮಹಾರಾಜ ಮತ್ತು ಸಂಸದ ಯದುವೀರ್​​ ಒಡೆಯರ್​​ ಅವರ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿದೆ. ಯದುವೀರ್​​ ಅವರನ್ನು ಈ ಸ್ಥಿತಿಯಲ್ಲಿ ಕಂಡ ನೆಟ್ಟಿಗರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಪರ-ವಿರೋಧ ಪ್ರತಿಕ್ರಿಯೆ

ಇನ್ನು ತಾವು ಪೊಲೀಸ್​​ ಬಸ್​​ನಲ್ಲಿ ಕೂತ ಫೋಟೋವನ್ನು ಸ್ವತಃ ಯದುವೀರ್​​ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ನಾನಾ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ ವಂಶಕ್ಕೆ ಹೇಗೆ ಗೌರವ ಕೊಡಬೇಕು ಎಂಬ ಸಾಮಾನ್ಯ ಪ್ರಜ್ಞೆಯೂ ಸರ್ಕಾರಕ್ಕೆ ಇಲ್ಲವಾ ಎಂದು ಒಬ್ಬರು ಪ್ರಶ್ನಿಸಿದ್ದರೆ, ರಾಜರನ್ನು ಈ ರೀತಿ ನೋಡಲು ತುಂಬಾನೇ ಬೇಜಾರಾಗುತ್ತೆ ಎಂದು ಮತ್ತೊಬ್ಬರು ಅನಿಸಿಕೆ ಹಂಚಿಕೊಂಡಿದ್ದಾರೆ. ಮಹಾರಾಜರೇ ನಿಮ್ಮ ಘನೆತೆ ಉಳಿಸಿಕೊಳ್ಳಿ ಎಂದು ಇನ್ನೋರ್ವರು ಹೇಳಿದ್ದರೆ, ರಾಜರು ರಾಜರಂತೆ ಇರಬೇಕು. ರಾಜಕೀಯ ಮಾಡಬಾರದು ಎಂದು ಮಗದೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರ ಗಣೇಶ ಗಲಾಟೆ: ಇನ್ಸ್​​ಪೆಕ್ಟರ್​​​ ವಿರುದ್ಧದ ಹಳೆ ಪ್ರಕರಣಗಳು ಮುನ್ನೆಲೆಗೆ

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ತಿ. ನರಸೀಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ ಅವರು ಷರತ್ತು ಹಾಗೂ ನಿಬಂಧನೆಗಳನ್ನು ಹಾಕುವುದರ ಜೊತೆಗೆ ಯುವಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಪೊಲೀಸ್​​ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತುಗೊಳಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್​​. ಅಶೋಕ್​​, ಸಂಸದ ಯದುವೀರ್​​ ಒಡೆಯರ್​​​, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮೈಸೂರು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಸುಬ್ಬಣ್ಣ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!