AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?

ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದೇ ಕೊಲೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?
ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada
ರಾಮ್​, ಮೈಸೂರು
| Edited By: |

Updated on:Apr 19, 2026 | 10:43 AM

Share

ಮೈಸೂರು, ಏಪ್ರಿಲ್​​ 19: ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ.

ಕುರ್ಣೇಗಾಲದಲ್ಲಿ ಮೊನ್ನೆಯಷ್ಟೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಜವರಪ್ಪ ಶವ ರಸ್ತೆಬದಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಜವರಪ್ಪ ಸಹೋದರ ರವಿ ನೀಡಿದ್ದ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಸಾವಿನ ಹಿಂದಿನ ಸತ್ಯವನ್ನು ರಿವೀಲ್​​ ಮಾಡಿದ್ದಾರೆ. ಆರೋಪಿ ಸಿದ್ದೇಶ್​​ಗೆ ಜವರಪ್ಪ ಪತ್ನಿ ಅಮೃತಾ ಜೊತೆಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ ಆತ ಇದ್ದರೆ ತಮ್ಮ ಸಂಬಂಧಕ್ಕೆ ತೊಂದರೆ ಆಗುತ್ತೆ ಎಂದು ಆರೋಪಿಗಳು ಜವರಪ್ಪನ ಕೊಲೆಗೆ ಪ್ಲ್ಯಾನ್​​ ಮಾಡಿದ್ದರು. ಅದರಂತೆ ಅಮೃತಾ ಕುಮ್ಮಕ್ಕಿನಿಂದ ಆಕೆಯ ಪ್ರಿಯಕರ ಸಿದ್ದೇಶ್​​ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು; ಮಂಗಳೂರು-ಕೇರಳದಲ್ಲಿ ಅನೈತಿಕ ಚಟುವಟಿಕೆಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದಳು.ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಬದಲಾಗಿ ಮರುದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆಗಾಗಿ ಎಸ್. ಪಿ. ಮಲ್ಲಿಕಾರ್ಜುನ ಬಾಲದಂಡಿ ಮೂರು ತಂಡಗಳನ್ನು ರಚನೆ ಮಾಡಿದ್ದರು. ಅಂತಿಮವಾಗಿ ಜವರಪ್ಪ ಸಾವಿನ ಸತ್ಯ ಹೊರಬಂದಿದ್ದು, ಪ್ರಿಯಕರನ ಜೊತೆ ಸೇರಿ ಪತ್ನಿಯೇ ಆತನ ಸಾವಿಗೆ ಕಾರಣವಾಗಿರೋದು ನಿಜಕ್ಕೂ ದುರ್ದೈವವೇ ಸರಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:39 am, Sun, 19 April 26

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ