ಮೈಸೂರು: ಜಿಲ್ಲೆಯ ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿ ದೇವಸ್ಥಾನ ತೆರವುಗೊಳಿಸಿದ್ದ ತಹಶೀಲ್ದಾರ್ ತಲೆದಂಡವಾಗಿದೆ. ನಂಜನಗೂಡು ತಹಶೀಲ್ದಾರ್ ತಲೆದಂಡವಾಗಿದೆ. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷದ ಹಲವು ನಾಯಕರು ಕೂಡ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿಧಾನಸೌಧದಲ್ಲಿ ಹೊಸ ನಿಯಮಾವಳಿ ರೂಪಿಸುವ ಬಗ್ಗೆಯೂ ಸರ್ಕಾರ ಪ್ರಸ್ತಾವಿಸಿತ್ತು. ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರದ ನಿಯಮಾವಳಿಗಳಿಗೆ ಒಳಪಡುವ ಧಾರ್ಮಿಕ ಕೇಂದ್ರಗಳನ್ನು ಕೆಡಹಬಾರದು ಎಂದು ತಿಳಿಸುವ ಬಗ್ಗೆ ಯೋಜಿಸಲಾಗಿತ್ತು. ಇದೀಗ, ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ದೇಗುಲ ತೆರವು ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ತಹಶೀಲ್ದಾರ್ ತಲೆದಂಡವಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಮಾಡಿ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಐಎಂಎ ಸಕ್ಷಮ ಪ್ರಾಧಿಕಾರಕ್ಕೆ ವರ್ಗಾಯಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಆದೇಶ ನೀಡಿದ್ದಾರೆ. ನಂಜನಗೂಡು ತಹಶೀಲ್ದಾರ್ ಹುದ್ದೆಯನ್ನು ಸರ್ಕಾರ ಖಾಲಿ ಉಳಿಸಿದೆ. ಸೂಕ್ತ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ಗೆ ಸೂಚನೆ ನೀಡಲಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿಗೆ ಪೇಜಾವರ ಮಠದ ಸ್ವಾಮೀಜಿಗಳು ಇಂದು (ಸೆಪ್ಟೆಂಬರ್ 27) ಭೇಟಿ ನೀಡಿದ್ದರು. ದೇಗುಲ ತೆರವು ಬಗ್ಗೆ ಮಾಹಿತಿ ಪಡೆದಿದ್ದರು. ದೇಗುಲ ತೆರವು ಬಳಿಕ ಶೆಡ್ನಲ್ಲಿ ಪ್ರತಿಷ್ಠಾಪಿಸಿರುವ ದೇವರಿಗೆ ಪೂಜೆ ಸಲ್ಲಿಸಿದ್ದರು. ದೇವರಿಗೆ ಪೂಜೆ ಸಲ್ಲಿಸಿ ಪೇಜಾವರ ಶ್ರೀಗಳು ವಾಪಸಾಗಿದ್ದರು.
ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ ರೂಪಿಸಲು ಸರ್ಕಾರ ನಿರ್ಧಾರ; ವಿಧೇಯಕ ಮಂಡನೆ
ಇದನ್ನೂ ಓದಿ: ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ
Published On - 7:19 pm, Mon, 27 September 21