AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನ್ಯೂ ಇಯರ್​ಗೆ ಗೈಡ್ ಲೈನ್ಸ್ ಜಾರಿ: ಮಹಿಳೆ, ಮಕ್ಕಳ ಸುರಕ್ಷತೆಗೆ ಆದ್ಯತೆ, ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಮಹಿಳೆಯರ ರಕ್ಷಣೆಗಾಗಿ ಪಿಂಕ್ ಗರುಡಾ ಪಡೆ ನಿಯೋಜಿಸಲಾಗಿದೆ. ಅತಿವೇಗ, ಕಿಡಿಗೇಡಿತನ ತಡೆಯಲು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮಧ್ಯರಾತ್ರಿ 1 ಗಂಟೆಗೆ ಮುಚ್ಚಬೇಕು. ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ.

ಮೈಸೂರಿನಲ್ಲಿ ನ್ಯೂ ಇಯರ್​ಗೆ ಗೈಡ್ ಲೈನ್ಸ್ ಜಾರಿ: ಮಹಿಳೆ, ಮಕ್ಕಳ ಸುರಕ್ಷತೆಗೆ ಆದ್ಯತೆ, ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಮೈಸೂರಿನಲ್ಲಿ ನ್ಯೂ ಇಯರ್​ಗೆ ಗೈಡ್ ಲೈನ್ಸ್ ಜಾರಿ: ಮಹಿಳೆ, ಮಕ್ಕಳ ಸುರಕ್ಷತೆಗೆ ಆದ್ಯತೆ, ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 30, 2024 | 5:40 PM

Share

ಮೈಸೂರು, ಡಿಸೆಂಬರ್​ 30: 2024 ಮುಗಿದು 2025ರ ಹೊಸ ವರ್ಷ (New Year) ಸ್ವಾಗತಿಸಲು ಇನ್ನೊಂದೇ ದಿನ ಬಾಕಿ ಉಳಿದಿದೆ. ನಾಡಿನೆಲ್ಲೆಡೆ ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ಸಿದ್ಧತೆ ಜೋರಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೂಡ ಹೊಸ ವರ್ಷಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಹೊಸ ವರ್ಷಾಚೆಣೆಗೆ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರಿಂದ ಗೈಡ್ ಲೈನ್ಸ್​ ಜಾರಿ ಮಾಡಲಾಗಿದೆ. ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಗೈಡ್ ಲೈನ್ಸ್​​ ಹೀಗಿದೆ

  • ಸಾರ್ವಜನಿಕರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ಪೊಲೀಸ್ ನಿರೀಕ್ಷಕರುಗಳು ನೇತೃತ್ವದಲ್ಲಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಗಳು ಕಾರ್ಯನಿರತವಾಗಿದ್ದು ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
  • ಮಹಿಳೆಯರ ರಕ್ಷಣೆಯ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ಪಡೆಗಳು ಗಸ್ತಿನಲ್ಲಿರುತ್ತದೆ.
  • ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆ ನಡೆಸಲಾಗುವುದು.
  • ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಣಾವಲು ನಿರ್ವಹಿಸಲಾಗುತ್ತದೆ.
  • ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದು ಹಾಗೂ ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಒಳಗೊಂಡ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದೆ. ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಚಾಲನೆಯಲ್ಲಿರುತ್ತದೆ. ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಾಗುವುದು.
  • ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮತ್ತು ಕಿಡಿಗೇಡಿಗಳ ಬಗ್ಗೆ ನಿಗಾವಹಿಸಲು ಚೆಕ್ ಪೋಸ್ಟ್ಗಳನ್ನು ತೆರೆಯುವದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 112 ವಾಹನ, ಹೈವೇ ಪೆಟ್ರೋಲ್ ವಾಹನಗಳನ್ನು ನಿಯೋಜಿಸಲಾಗಿದೆ.
  • ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗದಂತೆ ಕ್ರಮಕ್ಕೆ ಸೂಚಿಸಲಾಗಿದ್ದು, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್ ಮೆಂಟ್, ಅಪಾರ್ಟ್ ಮೆಂಟ್ ಅಸೋಸಿಯೇಷನ್, ಮಾಲ್ ಮತ್ತು ಸಂಘ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಸೂಚನೆ ಪಾಲಿಸುವಂತೆ ತಿಳಿಸಲಾಗಿದೆ.
  • ಡಿ. 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹೋಂ ಸ್ಟೇ, ಸಂಘಸಂಸ್ಥೆಗಳು ಪೊಲೀಸ್ ಆಯುಕ್ತರ ಕಛೇರಿಯಿಂದ ಅನುಮತಿ ಪಡೆದು ಮಧ್ಯರಾತ್ರಿ 1-00 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು.
  • ಸೋಷಿಯಲ್​ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಅಪಪ್ರಚಾರ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸದರಿಯವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಡಿ. 31ರ ರಾತ್ರಿ 7 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್, ಲಲಿತಮಹಲ್ ಗೇಟ್ ಮೂಲಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ಡಿ. 31ರ ರಾತ್ರಿ 8 ಗಂಟೆ ನಂತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್

ಚಾಮುಂಡಿಬೆಟ್ಟಕ್ಕೆ ಯಾವುದೇ ರೀತಿಯ ಊಟ ಮದ್ಯದ ಬಾಟಲಿ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದ್ದು, ರಾತ್ರಿ 9 ಗಂಟೆ ನಂತರ ಸಾರ್ವಜನಿಕರು ಚಾಮುಂಡಿಬೆಟ್ಟದಿಂದ ವಾಪಸ್ಸು ಬರುವಂತೆ ಸೂಚಿಸಲಾಗಿದೆ. ಇದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಲ್ಲ. ಚಾಮುಂಡಿಬೆಟ್ಟದಿಂದ ರಾತ್ರಿ 9 ಗಂಟೆ ನಂತರ ವಾಪಸ್ಸು ಬರುವವರು ತಾವರೆಕಟ್ಟೆ ದ್ವಾರದ ಮುಖಾಂತರ ಬರುವಂತೆ ಸೂಚಿಸಿದ್ದು, ಜನವರಿ 1 ರಂದು ಎಂದಿನಂತೆ ಪ್ರವೇಶಕ್ಕೆ ಅವಕಾಶವಿರಲಿದೆ ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್​ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು