ಮೈಸೂರು, ಆ. 04: ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ(Amrit Bharat Station Scheme) ಮೈಸೂರು ರೈಲ್ವೆ ವಿಭಾಗದಿಂದ 15 ರೈಲು ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಕರ್ನಾಟಕದ 8 ಪ್ರಮುಖ ರೈಲು ನಿಲ್ದಾಣಗಳನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು ಮೊದಲ ಹಂತದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಗಸ್ಟ್ 6ರಂದು ದೇಶದಾದ್ಯಂತ 508 ರೈಲ್ವೆ ನಿಲ್ದಾಣಗಳಿಗೆ ವಿಡಿಯೋ ಕಾನ್ಫೆರನ್ಸ್ ಮೂಲಕ ಶಿಲಾನ್ಯಾಸ ಮಾಡಲಿದ್ದಾರೆ. ಈ ಪೈಕಿ ಮೈಸೂರು ರೈಲ್ವೆ ವಿಭಾಗದಿಂದ 15 ರೈಲು ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತಿದೆ.
ಮೂಲಸೌಕರ್ಯ, ನಿಲ್ದಾಣ ನವೀಕರಿಸಿ ಮೇಲ್ದರ್ಜೆಗೆರಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ. ಈ ವರ್ಷದ ಬಜೆಟ್ ನಲ್ಲಿ ರಾಜ್ಯಕ್ಕೆ 7,561ಕೋಟಿ ಬಿಡುಗಡೆ ಮಾಡಲಾಗಿದೆ. ಮೈಸೂರು ವಿಭಾಗದ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ 347 ಕೋಟಿ ರೂ ಮಂಜೂರಾಗಿದೆ. ಮೈಸೂರು ರೈಲ್ವೆ ವಿಭಾಗದ 15 ರೈಲ್ವೆ ನಿಲ್ದಾಣಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದ್ದು ಆಗಸ್ಟ್ 6ರಂದು ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ ವಾಲ್ ಮಾಹಿತಿ ನೀಡಿದರು.
ಇದನ್ನೂ ಓದಿ: ತೆಲಂಗಾಣ: 21 ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ಮೋದಿ ಶಂಕುಸ್ಥಾಪನೆ
ಯಾವ ಯಾವ ನಿಲ್ದಾಣಗಳನ್ನು ಎಷ್ಟು ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಮಾಡಬೇಕು ಎಂದು ನೈಋತ್ಯ ರೈಲ್ವೆ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ. ಹುಬ್ಬಳ್ಳಿ ವಿಭಾಗದಲ್ಲಿ ಅಳ್ಳಾವರ ನಿಲ್ದಾಣ 17.2 ಕೋಟಿ, ಘಟಪ್ರಭಾ ನಿಲ್ದಾಣ 18.02 ಕೋಟಿ, ಗೋಕಾಕ್ ರೋಡ್ 17 ಕೋಟಿ, ಗದಗ 23.2 ಕೋಟಿ, ಕೊಪ್ಪಳ 21.1 ಕೋಟಿ ಮತ್ತು ಬಳ್ಳಾರಿ ನಿಲ್ದಾಣವನ್ನು 16.7 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಹಾಗೂ ಮೈಸೂರು ವಿಭಾಗದಲ್ಲಿ ಅರಸೀಕೆರೆ ನಿಲ್ದಾಣವನ್ನು 34.1 ಕೋಟಿ ಮತ್ತು ಹರಿಹರ ರೈಲು ನಿಲ್ದಾಣ 25.2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ.
ಮೈಸೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ