AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು; ಪ್ರಸಿದ್ಧ ವಿನಾಯಕ ದೇವಸ್ಥಾನದಲ್ಲಿ ಖದೀಮರ ಕೈಚಳಕ, ಚಿನ್ನ ಬೆಲೆ ಬಾಳುವ ವಿಗ್ರಹಗಳ ಕಳ್ಳತನ

ಮೈಸೂರು, ಹಾವೇರಿಯ ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದೆ. ಅದರಲ್ಲೂ ಮೈಸೂರು ಜಿಲ್ಲೆಯ ವಿನಾಯಕ ನಗರದ ವಿನಾಯಕ ದೇವಸ್ಥಾನದಲ್ಲಿ ಖದೀಮರು ಕೈ ಚಳಕ ತೋರಿಸಿದ್ದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು; ಪ್ರಸಿದ್ಧ ವಿನಾಯಕ ದೇವಸ್ಥಾನದಲ್ಲಿ ಖದೀಮರ ಕೈಚಳಕ, ಚಿನ್ನ ಬೆಲೆ ಬಾಳುವ ವಿಗ್ರಹಗಳ ಕಳ್ಳತನ
ವಿನಾಯಕ ದೇವಸ್ಥಾನ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Nov 24, 2023 | 11:32 AM

Share

ಮೈಸೂರು, ನ.24: ರಾಜ್ಯದ ಅನೇಕ ಕಡೆಗಳಲ್ಲಿ ದೇವಸ್ಥಾನಗಳಿಗೆ ನುಗ್ಗಿ ಖದೀಮರು ಕಳ್ಳತನ ಮಾಡಿರುವ ಘಟನೆಗಳು (Temple Theft) ನಡೆದಿವೆ. ಮೈಸೂರು ಜಿಲ್ಲೆಯ ವಿನಾಯಕ ನಗರದ ವಿನಾಯಕ ದೇವಸ್ಥಾನದ (Vinayaka Temple) ಕಿಟಕಿ ಗಾಜು ಒಡೆದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ. ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ ದೇವಸ್ಥಾನದಲ್ಲೂ ಕಳ್ಳತನ

ಎರಡು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಸುಮಾರು 4 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ತಾಲೂಕಿನ ನೀರಲಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದೇವತೆ ಮತ್ತು ಹುಲಿಗೇಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ದೇವಿಯ 6 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ, ಎರಡು ಮಾಂಗಲ್ಯ ಸರ ಸೇರಿದಂತೆ ಅನೇಕ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ದೇವಿಗೆ ಪೂಜೆ ಮಾಡಲೆಂದು ಪೂಜಾರಿ ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೇಕಲ್​ ನಿವಾಸಿಗಳಾದ ಚಂದನ್​ಕುಮಾರ್​, ಚಾನ್ ನವಾಜ್ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 45,000 ಮೌಲ್ಯದ 930 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರಾಮನಗರ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ, ಪಲ್ಟಿಯಾಗಿ ಹೊತ್ತಿ ಉರಿದ ಕಾರು

ಗೋವಾದಲ್ಲಿ ಕನ್ನಡದ ಬೀದಿ ಬದಿ ವ್ಯಾಪಾರಿಗಳ ಮೇಲೆ ದರ್ಪ

ಗೋವಾದಲ್ಲಿ ಬೀದರ್, ಧಾರವಾಡ, ಹುಬ್ಬಳ್ಳಿ, ಹಾವೇರಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ ಹಲವು ಭಾಗದ ಬಡ ವ್ಯಾಪಾರಿಗಳು ತರಕಾರಿ, ಹಣ್ಣು, ಹೂವು ವ್ಯಾಪಾರ ಮಾಡ್ತಿದ್ದಾರೆ. ನಿನ್ನೆ ಪಣಜಿಯಲ್ಲಿ ಬೀದಿ ಬದಿ ಹೂವು ಹಾಗೂ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ರು. ಆದ್ರೆ ಕರ್ನಾಟಕದ ವ್ಯಾಪಾರಿಗಳ ಗೋವನ್ ರೆವಲ್ಯೂಷನರಿ ಪಾರ್ಟಿ ಕಾರ್ಯಕರ್ತರು ದರ್ಪ ಮೆರೆದಿದ್ದಾರೆ. ವ್ಯಾಪಾರಕ್ಕೆ ಅಡ್ಡಿಪಡಿಸಿ ಹೂವು, ಹಣ್ಣು ಎಲ್ಲವನ್ನು ರಸ್ತೆಗೆ ಎಸೆದಿದ್ದಾರೆ. ಪೊಲೀಸರೇ ಈ ಕೃತ್ಯಕ್ಕೆ ಸಾಥ್ ನೀಡಿದ್ದಾರೆ ಅಂತಾ ಕನ್ನಡಿಗರು ಆರೋಪಿಸಿದ್ದಾರೆ. ಕರ್ನಾಟಕದ ವ್ಯಾಪಾರಿಗಳ ಮೇಲಿನ ದೌರ್ಜನ್ಯವನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ಖಂಡಿಸಿದ್ದಾರೆ. ಗೋವಾದ ವಾಹನಗಳನ್ನು ತಡೆಗಟ್ಟಿ, ಹೆದ್ದಾರಿ ಬಂದ್ ಮಾಡೋದಾಗಿ ಎಚ್ಚರಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:18 am, Fri, 24 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ