Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ

ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೋರ್ವ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jan 20, 2023 | 8:45 PM

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ (Leopard Attack in T.Narasipura) ಮುಂದುವರಿದಿದ್ದು, ಮತ್ತೋರ್ವ ಮಹಿಳೆ ಜೀವ ಪಡೆದಿದೆ (Leopard killed women). ಆ ಮೂಲಕ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಸಾವನ್ನಪ್ಪಿದ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಹೊರಗೆಯಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ನಡೆಸಿದ ಚಿರತೆ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಚಿರತೆ ಸಿದ್ದಮ್ಮರನ್ನು ಬಿಟ್ಟು ಓಡಿ ಹೋಗಿದ್ದು, ಜನರು ಬಂದು ನೋಡುವಷ್ಟರಲ್ಲಿ ಸಿದ್ದಮ್ಮ ಕೊನೆಯುಸಿರೆಳೆದಿದ್ದಾರೆ.

ನವೆಂಬರ್ ತಿಂಗಳಲ್ಲಿ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮನೆ ಮುಂದೆ ಕುಳಿತಿದ್ದ ಮೇಘನಾ ಎಂಬ ಯುವತಿಯನ್ನು ಚಿರತೆ ಕೊಂದು ಹಾಕಿತ್ತು. ಆ ಮೂಲಕ ಒಂದೇ ತಿಂಗಳ ಅಂತರದಲ್ಲಿ ಚಿರತೆ ಇಬ್ಬರನ್ನು ಕೊಂದು ಹಾಕಿತ್ತು. ಇದೀಗ ಸೌದೆ ಎತ್ತಿಕೊಳ್ಳಲು ಮನೆಯಿಂದ ಹೊರ ಬಂದ ಸಿದ್ದಮ್ಮರನ್ನು ಚಿರತೆ ಕೊಂದು ಹಾಕಿದೆ.

ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಚಿರತೆ ಆತಂಕ: ನಾಗರಭಾವಿ ಸರ್ಕಲ್​ನಿಂದ ವಿವಿಗೆ ತೆರಳುವ ರಸ್ತೆ ರಾತ್ರಿ 8 ರಿಂದ ಬೆಳಗ್ಗೆ 6ರವರೆಗೆ ಬಂದ್​

ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಹಾವಳಿಗೆ ಎರಡು ನರ ಬಲಿಯಾಗುತ್ತಿದ್ದಂತೆ ತಾಲೂಕಿನ ಜನಾಕ್ರೋಶ ಹೆಚ್ಚಾಗತೊಡಗಿತು. ಅದರಂತೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು. ಈ ಒಂದೇ ತಾಲೂಕಿನಲ್ಲಿ ಅಲ್ಲದೆ, ಮೈಸೂರು ಜಿಲ್ಲೆಯ ಕೆಲವೊಂದು ಜಿಲ್ಲೆಗಳಲ್ಲೂ ಚಿರತೆ ಹಾವಳಿ ಇದ್ದು, ಬೆರಳೆಣಿಕೆಯಷ್ಟು ಚಿರತೆ ಸೆರೆ ಸಿಕ್ಕಿವೆ. ಇದೀಗ ಮಹಿಳೆಯ ಸಾವಿನ ನಂತರ ಟಿ ನರಸೀಪುರ ತಾಲೂಕಿನ ಜನರಲ್ಲಿದ್ದ ಭಯ ಮತ್ತಷ್ಟು ಹೆಚ್ಚಾಗತೊಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 20 January 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್