AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ ಅವರು ಮೃತ ನೀರುಗಂಟಿಯ ಬಾಕಿ ಸಂಬಳ ಬಿಡುಗಡೆ ಮಾಡಲು 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟು, 25,000 ರೂ. ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಹರಿತ ಆಯುಧದಿಂದ ಕೈ ಕೊಯ್ದುಕೊಂಡು ನಾಟಕವಾಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಲೋಕಾಯುಕ್ತ ತನಿಖೆ ಮುಂದುವರಿದಿದೆ.

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!
ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ
ರಾಮ್​, ಮೈಸೂರು
| Edited By: |

Updated on: Mar 17, 2026 | 10:25 AM

Share

ಮೈಸೂರು, ಮಾ.17: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕಾರ ಮಾಡುತ್ತಿರುವ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಲೋಕ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು (PDO), ಬಂಧನದಿಂದ ತಪ್ಪಿಸಿಕೊಳ್ಳಲು ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾ.ಪಂ. ಕಚೇರಿಯಲ್ಲಿ ನಡೆದಿದೆ.

ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿದ್ದ ಸ್ವಾಮಿ ಎಂಬುವವರು ನಿಧನರಾದ ಬಳಿಕ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಸಿಕ್ಕಿತ್ತು. ಮೃತ ಸ್ವಾಮಿ ಅವರ ಎರಡು ವರ್ಷದ ಬಾಕಿ ಸಂಬಳ ಸುಮಾರು 4 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಪಿಡಿಒ ಮಂಜುಳಾ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಲಂಚ ನೀಡಲು ಇಚ್ಛಿಸದ ಮಹದೇವ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಕಚೇರಿಯಲ್ಲಿ ಮುಂಗಡವಾಗಿ 25 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಜುಳಾ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಕಂಗಾಲಾದ ಮಂಜುಳಾ, ಕಚೇರಿಯಲ್ಲೇ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ರಾದ್ಧಾಂತ ಮಾಡಿದ್ದಾರೆ. ಅಧಿಕಾರಿಗಳ ಮುಂದೆಯೇ ಹೈಡ್ರಾಮಾ ಸೃಷ್ಟಿಸಿ ತನಿಖೆಗೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಗಾಯಗೊಂಡ ಪಿಡಿಒ ಮಂಜುಳಾ ಅವರನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಯ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದುವರಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us