ಅರಮನೆ ನಗರಿಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಸೂಚನೆ; ವಿದ್ಯಾರ್ಥಿ, ಪೋಷಕರಿಗೆ ಖಡಕ್ ವಾರ್ನಿಂಗ್

ಮಕ್ಕಳ ಬೈಕ್ ಚಾಲನೆ ಬಗ್ಗೆ ನಿಗಾ ಇಡಿ. ಎಫ್​ಐಆರ್ ದಾಖಲಾದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಬೈಕ್ ವ್ಹೀಲಿಂಗ್ ವಿರುದ್ದ ಕಠಿಣ ಕ್ರಮ ಎಫ್​ಐಆರ್ ದಾಖಲಿಸುವುದಾಗಿ ವಿದ್ಯಾರ್ಥಿಗಳು, ಪೋಷಕರಿಗೂ ವಾರ್ನಿಂಗ್ ನೀಡಲಾಗಿದೆ.

ಅರಮನೆ ನಗರಿಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಸೂಚನೆ; ವಿದ್ಯಾರ್ಥಿ, ಪೋಷಕರಿಗೆ ಖಡಕ್ ವಾರ್ನಿಂಗ್
ಬೈಕ್ ಸ್ಟಂಟ್‌
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Jul 18, 2023 | 7:09 AM

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ(Mysuru) ಬೈಕ್ ವ್ಹೀಲಿಂಗ್ (Bike Wheeling) ಪ್ರಕರಣಗಳು ಹೆಚ್ಚಾಗಿವೆ. ಒಂದು ವಾರದಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಸದ್ಯ ಬೈಕ್ ಸ್ಟಂಟ್‌ಗೆ(Bike Stunt) ಬ್ರೇಕ್ ಹಾಕಲು ಮೈಸೂರು ಪೊಲೀಸರು(Mysuru Police) ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಬೈಕ್ ಸ್ಟಂಟ್ ಮಾಡುತ್ತಿರುವ ಯುವಕರು ಹಾಗೂ ಸ್ಟಂಟ್‌ಗೆ ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ವಾಹನಗಳ ಮಧ್ಯೆ ವ್ಹೀಲಿಂಗ್ ಮಾಡುತ್ತ ಅಪಾಯಕರ ಸಾಹಸ ಪ್ರದರ್ಶಿಸುತ್ತಿರುವ ದೃಶ್ಯಗಳು ಟಿವಿ9ಗೆ ಲಭ್ಯವಾಗಿವೆ. ಬನ್ನಿಮಂಟಪ ಎನ್​ಆರ್ ಮೊಹಲ್ಲಾ ರಿಂಗ್ ರಸ್ತೆಗಳಲ್ಲಿ ಬಿಂದಾಸ್ ವ್ಹೀಲಿಂಗ್ ಮಾಡುವ, ಐಶಾರಾಮಿ ಬೈಕ್‌ಗಳು ಟಿವಿಎಸ್ ಮೊಪೆಡ್‌ನಲ್ಲೂ ವ್ಹೀಲಿಂಗ್ ಮಾಡುವವರಿಗೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೈಕ್ ವ್ಹೀಲಿಂಗ್ ವಿರುದ್ದ ಕಠಿಣ ಕ್ರಮ ಎಫ್​ಐಆರ್ ದಾಖಲಿಸುವುದಾಗಿ ವಿದ್ಯಾರ್ಥಿಗಳು, ಪೋಷಕರಿಗೂ ವಾರ್ನಿಂಗ್ ನೀಡಲಾಗಿದೆ. ಮಕ್ಕಳ ಬೈಕ್ ಚಾಲನೆ ಬಗ್ಗೆ ನಿಗಾ ಇಡಿ. ಎಫ್​ಐಆರ್ ದಾಖಲಾದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಬೈಕ್ ವೀಲಿಂಗ್ ಬೇರೆ ವಾಹನ ಸವಾರರಿಗೂ ಸಮಸ್ಯೆಯಾಗುತ್ತದೆ ಎಂದು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Bengaluru News: ಗಂಡನ ಮನೆಯಲ್ಲಿ ಪ್ರಾಣಬಿಟ್ಟ ಮಹಿಳಾ ಟೆಕ್ಕಿ, ಕಾರಣ ನಿಗೂಢ

ಬೈಕ್​ಗಳ ನಡುವೆ ಅಪಘಾತ; ತಾತ ಸಾವು, ಮೊಮ್ಮಗನಿಗೆ ಗಾಯ

ಮೈಸೂರು ಜಿಲ್ಲೆ ಹುಣಸೂರು ನಗರದ ಬ್ಯಾಂಕ್ ಆಫ್ ಬರೋಡಾ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್​ಗಳ ನಡುವೆ ಅಪಘಾತವಾಗಿದ್ದು ತಾತ ರಾಮಶೆಟ್ಟಿ(72) ಸಾವು, ಮೊಮ್ಮಗ ವಿನಯ್​ಗೆ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬುಲೆಟ್ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಕೆಳಗೆ ಬಿದ್ದ ರಾಮಶೆಟ್ಟರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು. ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ರಾಮಶೆಟ್ಟಿ ಮೃತಪಟ್ಟಿದ್ದಾರೆ. ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 am, Tue, 18 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್