AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!

ಆರೋಪಿಗಳು ಬಡ ಯುವಕರು, ನಿರುದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಸಂಗ್ರಹಿಸಿ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು.

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!
ಮೈಸೂರು ನೈರುತ್ಯ ರೈಲ್ವೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ
TV9 Web
| Edited By: |

Updated on:Oct 28, 2021 | 9:10 AM

Share

ಮೈಸೂರು: ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ(44) ಮತ್ತು ಶಿವಸ್ವಾಮಿ(62) ಬಂಧಿತ ಆರೋಪಿಗಳು. ಆರೋಪಿಗಳು ಸುಮಾರು 400 ಜನರಿಗೆ ವಂಚಿಸಿದ್ದು, ಬಂಧಿತರಿಂದ ಖಾಲಿ ಚೆಕ್ಗಳು, 4,15,000 ನಗದು, ರೈಲ್ವೆ ನೇಮಕಾತಿಯ ನಕಲಿ ಆದೇಶ ಪ್ರತಿಗಳು, ನಕಲಿ ನಾಮಫಲಕ, ಲ್ಯಾಪ್​ಟಾಪ್, ಕಂಪ್ಯೂಟರ್​ನ ವಶಕ್ಕೆ ಪಡೆದಿದ್ದಾರೆ. ಮೈಸೂರು ನೈರುತ್ಯ ರೈಲ್ವೆ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳ ಬಣ್ಣ ಬಯಲಾಗಿದೆ.

ಆರೋಪಿಗಳು ಬಡ ಯುವಕರು, ನಿರುದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಸಂಗ್ರಹಿಸಿ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು. ಮಂಡಿಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಐವರ ವಂಚಕರ ಬಂಧನ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸುಮಾರು 500 ಜನರಿಗೆ ವಂಚಿಸಿ, 70 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ವಂಚಕರ ಜಾಡು ಹಿಡಿದ ಹೊಸದುರ್ಗ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದಾರೆ. ವಂಚನೆಯಲ್ಲಿ ಭಾಗಿಯಾಗಿದ್ದ ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ ಮಂಜುನಾಥ, ಬೆಂಗಳೂರಿನ ಅನಿಲ್​ನನ್ನು ಹೊಸದುರ್ಗ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12ಲಕ್ಷ 40ಸಾವಿರ ರೂ. ನಗದು ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ! ಹೊಸದುರ್ಗ ಪೊಲೀಸರಿಂದ ಐವರು ಅರೆಸ್ಟ್

7 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ 50 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ ಅಪಹರಣಕಾರರು, ಬಾಲಕಿಯ ಮಾವನ ಮೇಲೆಯೇ ಅನುಮಾನ

Published On - 8:51 am, Thu, 28 October 21