ಮೈಸೂರು ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪುತ್ರಿ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಪುತ್ರಿ ಪೊಲೀಸ್ ವಸತಿಗೃಹದಲ್ಲಿ ಆತ್ಕಹತ್ಯೆ ಮಾಡಿಕೊಂಡಿದ್ದು, ಕಾರಣ ನಿಗೂಢವಾಗಿದೆ.
ಮೈಸೂರು: ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪುತ್ರಿ ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ. ಇಂದು (ಭಾನುವಾರ) ಸಂಜೆ ಮೈಸೂರಿನ (Mysuru) ಜಲಪುರಿ ಪೊಲೀಸ್ ವಸತಿಗೃಹದ ಸಿ ಬ್ಲಾಕ್‌ನಲ್ಲಿ ಗಿರಿಜಾಲಕ್ಷ್ಮೀ(19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗಿರಿಜಾಲಕ್ಷ್ಮೀ(19) ಮೈಸೂರು ನಗರದ ಖಾಸಗಿ ಕಾಲೇಜಿನ ಪ್ರಥಮ ಬಿಕಾಂ ವ್ಯಾಸಾಂಗ ಮಾಡುತ್ತಿದ್ದಳು. ಆದ್ರೆ,ಗಿರಿಜಾಲಕ್ಷ್ಮೀ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.
ಮೈಸೂರು ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಪುತ್ರಿ ಗಿರಿಜಾಲಕ್ಷ್ಮೀ ಇಂದು(ಡಿಸೆಂಬರ್ 18) ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾಳೆ. ಹೊರಹೋಗಿದ್ದ ಮನೆಯವರು ವಾಪಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಗಿರಿಜಾಲಕ್ಷ್ಮೀಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಅಷ್ಟರೊಳಗೆ ಜೀವ ಹೋಗಿದೆ.
ಇನ್ನು ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ