AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!

ಮೈಸೂರಿನ ಕಡಕೊಳದಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಸಹಾಯ ಮಾಡುವ ನೆಪದಲ್ಲಿ ಇಬ್ಬರು ದುಷ್ಕರ್ಮಿಗಳು ಆತನ ಮೊಬೈಲ್‌ನಿಂದ 80,000 ರೂ. ಕದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹಣ ಸಿಕ್ಕ ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗಗೂ ದಾಖಲಿಸದೆ ಪರಾರಿಯಾಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಕದ್ದ ಹಣ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!
ಅಪಘಾತಕ್ಕೊಳಗಾವನಿಂದ ಹಣ ದೋಚಿದ ರಮೇಶ್ ಮತ್ತು ಮನು
ರಾಮ್​, ಮೈಸೂರು
| Edited By: |

Updated on: Dec 23, 2025 | 10:31 AM

Share

ಮೈಸೂರು, ಡಿಸೆಂಬರ್ 23: ರಸ್ತೆ ಅಪಘಾತಗಳು ಸಂಭವಿಸಿದಾಗ ಸಹಾಯ ಹಸ್ತ ಚಾಚುವುದು ಮಾನವೀಯತೆ. ಹಿಂದೆ ಅಕ್ಷರಸ್ಥರು ಕಡಿಮೆಯಿದ್ದಾಗ ನಡುರಸ್ತೆಯಲ್ಲಿ ಬಿದ್ದವನನ್ನು ಎತ್ತಲೂ ಜನ ಹಿಂದೆ ಮುಂದೆ ನೋಡುತ್ತಿದ್ದರು. ಆದರೀಗ ಕಾಲ ಬದಲಾಗಿದೆ. ಅಪಘಾತಕ್ಕೊಳಗಾದವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲು ಸಾಕಷ್ಟು ಜನ ಮುಂದೆ ಬರುತ್ತಾರೆ. ಹೀಗೆ ಸಹಾಯಕ್ಕೆ ಬರುವವರನ್ನೂ ನಂಬಬಾರದೇನೋ ಎಂದೆನಿಸುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಸಹಾಯ ಮಾಡಲು ಮುಂದೆ ಬಂದವರು ಅಪಘಾತವಾಗಿ ಬಿದ್ದವನಿಂದಲೇ ಸಾವಿರಾರು ರೂ. ದೋಚಿದ್ದು, ಮಾಹಿತಿ ತಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಯುಪಿಐನಿಂದ ಹಣ ಟ್ರಾನ್ಸಫರ್

ಮೈಸೂರು ತಾಲೂಕಿನ ಕಡಕೊಳದ ಬಳಿ ನಡೆದ ಅಪಘಾತವೊಂದು ನಡೆದಿದ್ದು, ಮಾನವೀಯತೆಯ ಮುಖವಾಡದ ಹಿಂದಿನ ಕರಾಳ ಮನಸ್ಥಿತಿಯನ್ನು ಬಿಚ್ಚಿಟ್ಟಿದೆ. ಡಿಸೆಂಬರ್ 19ರ ಮಧ್ಯರಾತ್ರಿ, ಕಡಕೋಳದ ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ಗಣೇಶ್ ಎಂಬ ಯುವಕ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತಕ್ಕೆ ಒಳಗಾಗಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈತನ ಸಹಾಯಕ್ಕೆಂದು ಮಹದೇವಪುರ ನಿವಾಸಿಗಳಾದ ರಮೇಶ್ ಮತ್ತು ಮನು ಬಂದಿದ್ದರು. ಗಣೇಶ್‌ನನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಆತನ ಮೊಬೈಲ್ ವಶಪಡಿಸಿಕೊಂಡ ಪಾಪಿಗಳು, ಆತನ ಅಸಹಾಯಕತೆಯನ್ನೂ ಲೆಕ್ಕಿಸದೆ ಆತನ ಖಾತೆಯಿಂದ ಬರೋಬ್ಬರಿ 80 ಸಾವಿರ ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ ಮಾನವೀಯತೆ ಮರೆತ ಬೆಂಗಳೂರಿನ ಜನ: ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ

ಆರೋಪಿಗಳನ್ನು ಬಂಧಿಸಿ, ಹಣ ವಸೂಲಿ ಮಾಡಿದ ಪೊಲೀಸರು

ಗಾಯಗೊಂಡ ಸ್ಥಿತಿಯಲ್ಲಿದ್ದ ಗಣೇಶ್‌ನ ಮೊಬೈಲ್ ತೆಗೆದುಕೊಂಡ ಪಾಪಿಗಳು, ಆತನ ಫಿಂಗರ್​ಪ್ರಿಂಟ್ ಬಳಸಿ ಯುಪಿಐ ಮೂಲಕ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಹಣ ವರ್ಗಾವಣೆ ಮುಗಿದ ಕೂಡಲೇ ಗಣೇಶ್‌ನನ್ನು ಆಸ್ಪತ್ರೆಗೂ ಸೇರಿಸದೆ ಅಸಹಯಕ ಸ್ಥಿತಿಯಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದ ಗಣೇಶ್​ನ ಸಹೋದರ ಅಂಕನಾಯಕ ಸ್ಥಳಕ್ಕೆ ಆಗಮಿಸಿ, ಆತನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಘಟನೆಯ ಕುರಿತು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತ್ವರಿತವಾಗಿ ಹಣ ವರ್ಗಾವಣೆ ಮಾಹಿತಿಗಳನ್ನು ಸಂಗ್ರಹಿಸಿ, ರಮೇಶ್ ಮತ್ತು ಮನು ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ರೂ. ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ