ಪ್ರವಾಸಿಗರ ಗಮನಕ್ಕೆ: ಈ ದಿನಗಳಲ್ಲಿ ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ
Mysuru Palace: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಪ್ರತಿವರ್ಷ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದೆ. ಆದ್ರೆ, ಬರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ಅದ್ಧೂರಿ ದಸರಾ ಕೈಬಿಟ್ಟು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿದ್ದು, ಈಗಾಗಲೇ ಸಕಲ ಸಿದ್ಧತೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಮೈಸೂರು ಅರಮನೆಗೆ ಕೆಲ ದಿನಗಳ ಕಾಲ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವೆಲ್ಲ ದಿನಗಳು ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎನ್ನುವ ವಿವರ ಇಲ್ಲಿದೆ.
ಮೈಸೂರು, (ಅಕ್ಟೋಬರ್ 06): ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸಾರ್ವಜನಿಕರಿಗೆ (Public) ಮೈಸೂರು ಅರಮನೆ (Mysuru Palace) ಪ್ರವೇಶ ನಿರ್ಬಂಧಿಸಲಾಗಿದೆ. ದಸರಾ ಅಂಗವಾಗಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕಾರ್ಯಗಳನ್ನು ಕೈಗೊಳ್ಳುವುದರಿಂದಾಗಿ ನಿಗದಿತ ದಿನಗಳಲ್ಲಿ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಾದ್ರೆ, ಯಾವೆಲ್ಲ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧಿಸಲಾಗಿದೆ ಎನ್ನುವುದು ಈ ಕೆಳಗಿನಂತಿದೆ.
ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದ್ದು, ಅಕ್ಟೋಬರ್ 9ರಂದು ಸಿಂಹಾಸನ ಜೋಡಣೆ ಕಾರ್ಯಕ್ರಮ ಇರುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಅರಮನೆ ಪ್ರವೇಶ ಇರುವುದಿಲ್ಲ.
ಇದನ್ನೂ ಓದಿ: Mysore Dasara 2023: ಮೈಸೂರು ಅರಮನೆಯಲ್ಲಿ ಯಾವಾಗ-ಯಾವ್ಯಾವ ಪೂಜೆ? ಇಲ್ಲಿದೆ ಕಾರ್ಯಕ್ರಮಗಳ ಪಟ್ಟಿ
- ಅಕ್ಟೋಬರ್ 15ರಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸುವುದದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಸಾರ್ವಜನಿಕರಿಗೆ ಅರಮನೆ ಪ್ರವೇಶವಿಲ್ಲ.
- ಅಕ್ಟೋಬರ್ 23ರಂದು ಅರಮನೆಯಲ್ಲಿ ಆಯುಧಪೂಜೆ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.
- ಅಕ್ಟೋಬರ್ 24ರಂದು ವಿಜಯದಶಮಿ (ಜಂಬು ಸವಾರಿ) ಹಿನ್ನೆಲೆಯಲ್ಲಿ ಅಂದು ಇಡೀ ದಿನ ಸಾರ್ವಜನಿಕರಿಗೆ ಅರಮನೆ ಪ್ರವೇಶ ಅವಕಾಶ ಇರುವುದಿಲ್ಲ.
- ಇನ್ನು ನವೆಂಬರ್ 08ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧಿಸಲಾಗಿದೆ.
ಈ ಮೇಲಿನ ಎಲ್ಲಾ ದಿನಾಂಕಗಳಂದು ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಇರಲಿದ್ದು, ಇದಕ್ಕೆ ಪ್ರವಾಸಿಗರು ಸಹಕರಿಸಬೇಕೆಂದು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಮನವಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Fri, 6 October 23